ಮಂಡ್ಯ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪುರದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಗುಡಿಗೆರೆ ಕಾಲೋನಿಯ ಗುರು.ಎಚ್. (33) ವೀರಮರಣವನ್ನಪ್ಪಿದ್ದಾರೆ. ಅವರ ಅಗಲಿಕೆಯನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಪತ್ನಿ ಕಲಾವತಿ ಅವರ ಅಳಲು ಮುಗಿಲುಮುಟ್ಟಿದ್ದು, ಮನಕಲಕುವಂತಿದೆ.
ನಾನು ಪ್ರತಿದಿನ ಅವರ ಜೊತೆ ಫೋನಿನಲ್ಲಿ ಮಾತನಾಡುತ್ತಿದ್ದೆ. ಅವರು ಬೆಳಗ್ಗೆ 11 ಗಂಟೆಗೆ ಫೋನ್ ಮಾಡಿದ್ದರು. ನಾನು ಕೆಲಸ ಮಾಡುತ್ತಿದ್ದರಿಂದ ಅವರ ಜೊತೆ ಮಾತನಾಡಲು ಸಾಧ್ಯವಾಗಿಲ್ಲ. ಅವರು ಊರಿಂದ ಹೋಗಿ ನಾಲ್ಕು ದಿನಗಳು ಆಗಿರಲಿಲ್ಲ. ತುಂಬಾ ನೋವಾಗುತ್ತಿದೆ ಎಂದು ಕಲಾವತಿ ಅವರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಮಂಡ್ಯದ ಯೋಧ ಹುತಾತ್ಮ – ಫೆ.10ಕ್ಕೆ ರಜೆ ಮುಗಿಸಿ ಊರಿಂದ ಹೊರಟಿದ್ದರು
Advertisement
Advertisement
ನನ್ನಿಂದ ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಗುರುವಾರ ಒಂದು ದಿನ ಅವರ ಜೊತೆ ಮಾತನಾಡಿದ್ರೆ ಆಗುತ್ತಿತ್ತು. ನಾನು 6 ಗಂಟೆಯಿಂದ ಫೋನ್ ಮಾಡಿ ಮಾಡಿ ಸಾಕಾಯ್ತು. ನನಗೆ ಅವರು ಬೇಕು ಅಮ್ಮಾ ಎಂದು ತಾಯಿ ಮಡಿಲಲ್ಲಿ ಮಲಗಿಕೊಂಡು ಅಳುತ್ತಿದ್ದಾರೆ.
Advertisement
ಗುರುವಾರ ಮಧ್ಯಾಹ್ನ 3.30ರ ಸುಮಾರಿಗೆ ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಅದಿಲ್ ದರ್ ಎಂಬ ಉಗ್ರ ಸ್ಕಾರ್ಪಿಯೋ ಕಾರಿನಲ್ಲಿ ಸ್ಫೋಟಕ ತುಂಬಿ ಆತ್ಮಾಹುತಿ ದಾಳಿ ಮಾಡಿದ್ದನು. ಈ ದಾಳಿಯಲ್ಲಿ ಇದೂವರೆಗೆ 44 ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದರು.
Advertisement
ಒಂದು ವರ್ಷ ಹಿಂದೆ ಗೃಹ ಪ್ರವೇಶ ಮಾಡಿಕೊಂಡಿದ್ದ ಗುರು ಅವರಿಗೆ 10 ತಿಂಗಳ ಹಿಂದೆ ಮದುವೆಯಾಗಿತ್ತು. ಸ್ವಂತ ಮಾವನ ಮಗಳಾದ, ಹಲಗೂರು ಬಳಿಯ ಸಾಸಲಾಪುರ ಗ್ರಾಮದವರಾದ ಕಲಾವತಿಯನ್ನು ವಿವಾಹವಾಗಿದ್ದರು. 15 ದಿನದ ಹಿಂದೆ ರಜೆಗೆಂದು ಬಂದಿದ್ದ ಗುರು ಅವರು ಫೆಬ್ರವರಿ 10ರಂದು ಗುಡಿಗೆರೆ ಕಾಲೋನಿಯಿಂದ ರಜೆ ಮುಗಿಸಿಕೊಂಡು ಹೊರಟಿದ್ದರು. ಹೀಗೆ ಹೊರಟಿದ್ದ ಗುರು ಗುರುವಾರವಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ, ಕರ್ತವ್ಯಕ್ಕೆ ವಾಪಸ್ ಬರುತ್ತಿದ್ದಂತೆಯೇ ಮಾರಣಹೋಮದಲ್ಲಿ ಸಾವನ್ನಪ್ಪಿದ್ದು ವಿಧಿ ವಿಪರ್ಯಾಸ. ಗುರು ಸಾವಿನ ಸುದ್ದಿ ಕೇಳಿ ಗುಡಿಗೆರೆ ಕಾಲೋನಿಯ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
https://www.youtube.com/watch?v=5JqTWRx0JWA
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv