ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದ್ದು, ಇದೀಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ದೇಣಿಗೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದೆ, ಕೋವಿಡ್ -19 ಮಹಾಮಾರಿ ದೇಶದಲ್ಲಿ ಹರಡುತ್ತಿದ್ದು, ಅದರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನನ್ನ ಕಳಕಳಿಯ ಕೊಡುಗೆಯಾಗಿದೆ. ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಾಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ. ಗಳನ್ನು ನೀಡಿದ್ದೇನೆ ಎಂದು ಲೆಟರ್ ಪೋಸ್ಟ್ ಮಾಡಿದ್ದಾರೆ.
Advertisement
ಕೋವಿಡ್ -19 ಮಹಾಮಾರಿ ದೇಶದಲ್ಲಿ ಹರಡುತ್ತಿದ್ದು, ಅದರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನನ್ನ ಕಳಕಳಿಯ ಕೊಡುಗೆ.
ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50, 00, 000 ಲಕ್ಷ ರೂ. ಗಳನ್ನು ನೀಡಿದ್ದೇನೆ. pic.twitter.com/13I0SgjZgg
— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) March 26, 2020
Advertisement
ಇನ್ನೊಂದು ಟ್ವೀಟ್ ಮಾಡಿ, ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದೇನೆ. ಅಲ್ಲದೆ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಕ್ಕೆ ನೀಡಿದ್ದೇನೆ ಎಂದು ಬರೆದುಕೊಂಡು ನರೇಂದ್ರ ಮೋದಿ, ಬಿಎಸ್ ಯಡಿಯೂರಪ್ಪ, ಶ್ರೀರಾಮುಲುಗೆ ಟ್ಯಾಗ್ ಮಡಿದ್ದಾರೆ.
Advertisement
@narendramodi @PMOIndia @BSYBJP @CMofKarnataka @drashwathcn @sriramulubjp ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ವೇತನ 2, 00, 000 ರೂ. ಗಳನ್ನು ದೇಣಿಗೆಯಾಗಿ ನೀಡಿದ್ದೇನೆ. ಅಲ್ಲದೆ ಎರಡು ತಿಂಗಳ ವೇತನ 2, 00, 000 ರೂ. ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್ -19ಕ್ಕೆ ನೀಡಿದ್ದೇನೆ.
???? https://t.co/WgJfQQ0FFA
— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) March 26, 2020
Advertisement
ನಿನ್ನೆಯಷ್ಟೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಕೊರೊನಾದಿಂದ ಕಂಗೆಟ್ಟವರಿಗೆ ಪ್ರಧಾನಿ ಮಂತ್ರಿ ನಿಧಿಯಿಂದ 1.70 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 21 ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದ್ದಾರೆ. ಇದು ಜೀವನ ಮತ್ತು ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅಕ್ಕಿ ಯೋಜನೆ ಅಡಿ ಈಗಾಗಲೇ 5 ಕೆಜಿ ಅಕ್ಕಿ, ಗೋಧಿ ನೀಡಲಾಗುತ್ತಿದೆ. ಇದರ ಜೊತೆ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.