ಮಂಡ್ಯ: ತನ್ನ ತಾಯಿಗೆ ಕೆಟ್ಟದಾಗಿ ಸನ್ನೆ ಮಾಡಿದ್ದ ವ್ಯಕ್ತಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ತಂದಿದ್ದ ಅಪರಾಧಿಗೆ ಮಂಡ್ಯದ (Mandya ) 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Sentence) ಹಾಗೂ 2 ಲಕ್ಷ ರೂ. ದಂಡ ವಿಧಿಸಿದೆ.
ಮಳವಳ್ಳಿ ತಾಲೂಕಿನ ಚಿಕ್ಕಬಾಗಿಲು ಗ್ರಾಮದ ಪಶುಪತಿ ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಆತ ತನ್ನ ತಾಯಿಗೆ ಕೆಟ್ಟ ಸನ್ನೆ ಮಾಡಿದ ಎಂಬ ಕಾರಣಕ್ಕೆ ಗಿರೀಶ್ ಎಂಬಾತನನ್ನು 2018ರ ಸೆ. 29ರಂದು ಜಮೀನಿನ ಬಳಿ ಕೆಲಸ ಮಾಡಲು ಕೊಡಲಿಯನ್ನು ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಕೈಯಲ್ಲಿದ್ದ ಕೊಡಲಿಯನ್ನು ಕಿತ್ತುಕೊಂಡು ಏಕಾಏಕಿ ಗಿರೀಶನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಬಳಿಕ ತಲೆ ಕತ್ತರಿಸಿಕೊಂಡು ಬೈಕ್‌ನಲ್ಲಿ ತಂದು ಮಳವಳ್ಳಿ ಪುರ ಪೊಲೀಸ್ ಠಾಣೆಗೆ ತಂದು ಶರಣಾಗಿದ್ದ. ಇದನ್ನೂ ಓದಿ: ನ್ಯಾ.ವರ್ಮಾ ಬಂಗ್ಲೆಯಲ್ಲಿ ಕಂತೆ ಕಂತೆ ನಗದು ಪತ್ತೆ ಕೇಸ್ – ಪೊಲೀಸರಿಂದ 8 ಮೊಬೈಲ್ ಸೀಜ್!
ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ವೃತ್ತ ನಿರೀಕ್ಷಕರಾದ ತನಿಖಾಧಿಕಾರಿ ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀಕಾಂತ್ ಆರ್. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದನ್ನೂ ಓದಿ: ಲಾಂಗ್ ವಿವಾದ: ರಜತ್, ವಿನಯ್ 3 ದಿನ ಪೊಲೀಸ್ ಕಸ್ಟಡಿಗೆ