ಮಂಡ್ಯ: ಅರಣ್ಯ ಇಲಾಖೆ ಅನುಮತಿ ಪಡೆಯದೇ ಟ್ರೈನಿ ಪೊಲೀಸರನ್ನು ಬಳಸಿಕೊಂಡು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ ಸುಭಾಷ್ ನಗರದಲ್ಲಿರುವ ತಮ್ಮ ಅಧಿಕೃತ ನಿವಾಸದ ಆವರಣದಲ್ಲಿದ್ದ ಮರಗಳನ್ನು ಕತ್ತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
Advertisement
ಡಾ.ಎಂ.ಅಶ್ವಿನಿ ಅವರು ಸೋಮವಾರ ಸಂಜೆ ರಸ್ತೆಯನ್ನು ಬಂದ್ ಮಾಡಿ ವಾಸ್ತು ಕಾರಣಕ್ಕೆ ನಿವಾಸದ ಒಳ ಆವರಣದಲ್ಲಿದ್ದ 11 ಅಶೋಕ ಮರಗಳನ್ನು ಯಂತ್ರದ ಮೂಲಕ ಕತ್ತರಿಸಿದ್ದಾರೆ. ಈ ಪರಿಣಾಮ ಅವರು ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದು, ಟ್ರೈನಿ ಪೆÇಲೀಸರಿಂದ ರೆಂಬೆ ಕೊಂಬೆಗಳನ್ನು ಪೊಲೀಸ್ ವಾಹನದಲ್ಲಿ ಸ್ಥಳಾಂತರ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಹೋಟೆಲ್‍ನಲ್ಲಿ ಅಗ್ನಿ ಅವಘಡ – 7 ಜನ ಪಾರು, ತಪ್ಪಿತು ಭಾರೀ ಅನಾಹುತ
Advertisement
Advertisement
Advertisement
ನೋಟಿಸ್ ಜಾರಿ:
ಈ ರೀತಿ ಮರಗಳನ್ನು ಕತ್ತರಿಸಲು ಅರಣ್ಯ ಇಲಾಖೆಯಿಂದ ಮಾಹಿತಿ ಪಡೆದಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಸುದ್ದಿಗಾರರೊಂದಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ಮಾತನಾಡಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಮ್ಮಿಂದ ಯಾವುದೇ ರೀತಿಯ ಅನುಮತಿ ಪಡೆದಿಲ್ಲ. ಸರ್ಕಾರಿ ನಿವಾಸ ಆಗಿರುವುದರಿಂದ ಅನುಮತಿ ಪಡೆಯಬೇಕಾಗಿದೆ. ಇದರ ಬಗ್ಗೆ ನೋಟಿಸ್ ನೀಡಲಾಗುವುದು. ನೋಟಿಸ್‍ಗೆ ಉತ್ತರ ನೀಡದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚಾಕುವಿನಿಂದ ಎದೆಗೆ, ಹೊಟ್ಟೆಗೆ ಇರಿದು ವ್ಯಕ್ತಿಯ ಬರ್ಬರ ಹತ್ಯೆ