– ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಆದೇಶ
ಮಂಡ್ಯ: ಕೆರಗೋಡು ಹನುಮಧ್ವಜ ವಿವಾದಕ್ಕೆ (Hanuman Flag Controversy) ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳ ಮೇಲೆ ಖಾಕಿ ಪಡೆ ಹದ್ದಿನ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆಗಳು, ಪೋಸ್ಟರ್‌ಗಳು ಹಾಗೂ ಉದ್ರಿಕ್ತ ಭಾಷಣಗಳನ್ನ ಹಂಚಿಕೊಳ್ಳದಂತೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Mandya SP) ಆದೇಶಿಸಿದ್ದಾರೆ.
Advertisement
ಆದೇಶ ಪ್ರತಿಯಲ್ಲಿ ಏನಿದೆ?
ಹನುಮಧ್ವಜ ಸಂಘರ್ಷ ಸಂಬಂಧ ಪ್ರಕಟಣೆ ಹೊರಡಿಸಿರುವ ಎಸ್ಪಿ, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾರೇ ಆಗಲಿ ಸಾಮಾಜಿಕ ಜಾಲತಾಣಗಳಾದ X, Facebook, Whatsaap, Instagram, Youtube ಇತ್ಯಾದಿಗಳಲ್ಲಿ ಸಾಮಾಜಿಕ ಸ್ವಾಸ್ಥ್ಯಕ್ಕೆ ಭಂಗ ತರುವ ಚಿತ್ರಗಳು, ವಿಡಿಯೋಗಳು, ಪ್ರಚೋದನಾಕಾರಿ ಹೇಳಿಕೆಗಳು, ಪೋಸ್ಟರ್‌ಗಳು ಹಾಗೂ ಉದ್ರೇಕಕಾರಿ ಭಾಷಣಗಳನ್ನ ಮಾಡಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕಳುಹಿಸಬಾರದು. ಇದನ್ನೂ ಓದಿ: ಕೆರಗೋಡು ಹನುಮ ಧ್ವಜ ತೆರವಿಗೆ ಆಕ್ರೋಶ- ಮಂಡ್ಯದಲ್ಲಿ ಕಲ್ಲು ತೂರಾಟ, ಲಾಠಿಚಾರ್ಜ್
Advertisement
Advertisement
ಒಂದು ವೇಳೆ ಕಳುಹಿಸಿದರೆ ಹಾಗೂ ಇದಕ್ಕೆ ಪ್ರಚೋದನೆ ನೀಡುವಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳ ಮೇಲೆ ಜಿಲ್ಲಾಡಳಿತವು ತೀವ್ರತರವಾದ ನಿಗಾ ಇಟ್ಟಿರುತ್ತದೆ ಎಂದು ಆದೇಶ ಪ್ರತಿಯಲ್ಲಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿಯೊಬ್ಬರ ಮಗ ಜಿಲ್ಲೆಗೆ ಬಂದು ಶಾಂತಿ ಕದಡುವ ನಿರ್ಧಾರ ಮಾಡಿರೋದು ಸರಿಯಲ್ಲ: ಚಲುವರಾಯಸ್ವಾಮಿ
Advertisement
ಏನಿದು ಪ್ರಕರಣ?
ಕಳೆದ ಜನವರಿ 28ರಂದು ಮಂಡ್ಯದ ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಭದಲ್ಲಿ ಹಾರಾಡುತ್ತಿದ್ದ ಹನುಮಧ್ವಜವನ್ನು ಪೊಲೀಸ್ ಅಧಿಕಾರಿಗಳು ತೆರವುಗೊಳಿಸಿದ್ದರು. ಇದರಿಂದ ರೊಚ್ಚಿಗೆದ್ದ ಕೆರಗೋಡು ಗ್ರಾಮಸ್ಥರು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದಿದ್ದರು. ಭಾರೀ ಹೈಡ್ರಾಮಾ ನಡುವೆ ತಳ್ಳಾಟ-ನೂಕಾಟವೂ ನಡೆದಿತ್ತು. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೊನೆಗೆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವಿವಾದ ರಾಜಾದ್ಯಂತ ವ್ಯಾಪಿಸಿತು. ಇದನ್ನೂ ಓದಿ: ಹನುಮಂತನ ಕೆಣಕಿದ್ದಕ್ಕೆ ಲಂಕ ದಹನವಾಯ್ತು, ಅದೇ ರೀತಿ ನಿಮ್ಮ ಅವನತಿಯಾಗುತ್ತೆ: ಹೆಚ್‍ಡಿಕೆ ವಾಗ್ದಾಳಿ