ಮಂಡ್ಯ: ಒಂದು ವೇಳೆ ಸುಮಲತಾ ಅಂಬರೀಶ್ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡದೇ ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ರೆ, ನಾವು ಅವರ ಪರವಾಗಿಯೇ ಕೆಲಸ ಮಾಡುತ್ತೇವೆ ಎಂದು ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೈತ್ರಿಯಾದರೂ ಮಂಡ್ಯದಲ್ಲಿ ಮಾತ್ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸಾಧ್ಯವಿಲ್ಲ ಎಂಬ ಸಂದೇಶವನ್ನು ವರಿಷ್ಠರಿಗೆ ರವಾನಿಸಿದ್ದಾರೆ.
ಇಂದಿನಿಂದ ಐದು ದಿನಗಳ ಕಾಲ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಪ್ರವಾಸ ಮಾಡಲಿದ್ದು, ಕಾಂಗ್ರೆಸ್ ಮುಖಂಡರು ಮತ್ತು ಅಂಬರೀಶ್ ಅಭಿಮಾನಿಗಳನ್ನು ಭೇಟಿ ಮಾಡಿ ಚುನಾವಣಾ ಸಂಬಂಧ ಮಾತುಕತೆ ನಡೆಸಲಿದ್ದಾರೆ.
Advertisement
Advertisement
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿ ಸುಮಲತಾ ಅಂಬರೀಶ್ ಈಗಾಗಲೇ ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಮುಖಂಡರ ಭೇಟಿ ಮಾಡಿದ್ದಾರೆ. ಆದರೆ ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಮಗ ನಿಖಿಲ್‍ಗೆ ಮಂಡ್ಯ ಕ್ಷೇತ್ರದ ಟಿಕೆಟ್ ನೀಡುವ ಬಗ್ಗೆ ಈಗಾಗಲೇ ಮೈತ್ರಿ ಪಕ್ಷದಲ್ಲಿ ತೆರೆಮರೆ ಮಾತುಕತೆ ನಡೆಯುತ್ತಿದೆ.
Advertisement
ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹಿಂದಿನಿಂದಲೂ ಬದ್ಧ ವೈರಿಗಳಾಗಿದ್ದು, ಸುಮಲತಾ ಅವರು ಪಕ್ಷೇತರರಾಗಿ ಸ್ಪರ್ಧಿಸಿದ್ರು ಅವರ ಪರ ಚುನಾವಣೆ ಮಾಡಲು ಬಹುತೇಕ ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಇಷ್ಟೆಲ್ಲ ಬೆಳವಣಿಗೆ ನಡುವೆ ಸುಮಲತಾ ಅವರು ಇಂದಿನಿಂದ ಐದು ದಿನಗಳ ಮಂಡ್ಯ ಪ್ರವಾಸ ಮಾಡುತ್ತಿದ್ದು ಕುತೂಹಲ ಮೂಡಿಸಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv