ಮಂಡ್ಯ: ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆಯೊಂದು ಕುಸಿದು ಬಿದ್ದಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿನ್ನೇನಹಳ್ಳಿ ಗ್ರಾಮದ ಪಾರ್ವತಮ್ಮ ಎಂಬ ಮಹಿಳೆಗೆ ಸೇರಿದ್ದ ಮನೆ ಮಳೆಯಿಂದ ಕುಸಿದು ಬಿದ್ದಿದೆ. ಕಳೆದ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವ ಕಾರಣ ಪಾರ್ವತಮ್ಮ ಅವರ ಮನೆ ಶನಿವಾರ ರಾತ್ರಿ ಕುಸಿದು ಬಿದ್ದಿದೆ. ಇದರಿಂದ ಪಾರ್ವತಮ್ಮ ಪ್ರಾಣಪಾಯದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಇದನ್ನೂ ಓದಿ: ಹಲವು ವರ್ಷಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ರೆಡ್ಡಿ-ರಾಮುಲು
ಮನೆ ಕುಸಿದು ಬಿದ್ದ ಕಾರಣ ಮನೆಯಲ್ಲಿ ಇದ್ದ ವಸ್ತುಗಳೆಲ್ಲವೂ ನಾಶವಾಗಿವೆ. ಪಾರ್ವತಮ್ಮ ಅವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬೊಮ್ಮಾಯಿ