ಮಂಡ್ಯ: ಸಂಬಳ ನೀಡದೆ ಕೆಲಸದಿಂದ ವಜಾ ಮಾಡಿದ್ದಕ್ಕೆ ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ಮಂಡ್ಯದ ಕೋಡಿ ಶೆಟ್ಟಿಪುರ ಗ್ರಾಮದಲ್ಲಿ ನಡೆದಿದೆ.
28 ವರ್ಷದ ಸುನೀತಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ಈಕೆ ಡಿಎಚ್‍ಒ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡಿ ಗ್ರೂಪ್ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದರು. 11ತಿಂಗಳಿಂದ ಸಂಬಳ ನೀಡದೆ ಏಕಾಏಕಿ ಕೆಲಸದಿಂದ ವಜಾಗೊಳಿಸಿದ್ದಾರೆ. ಸಂಬಳ ಕೇಳಲು ಹೋದಾಗ ಮಂಡ್ಯ ಜಿಲ್ಲಾ ಆರೋಗ್ಯ ಅಧಿಕಾರಿ ಮಂಚೇಗೌಡ ಅವರು ಕೆಲಸಕ್ಕೆ ಬಾರದಂತೆ ಹೇಳಿದ್ದಾರೆ ಎಂದು ಸುನೀತಾ ಆರೋಪ ಮಾಡಿದ್ದಾರೆ.
ಇದರಿಂದ ಮನನೊಂದು ಮಹಿಳೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಕಿ ಸಂಬಳ ನೀಡಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಸುನೀತಾ ಮನವಿ ಮಾಡಿಕೊಳ್ಳುತ್ತಿದ್ದಾರೆ.