– ದಾಖಲೆ ಸಮಯದಲ್ಲಿ ಮೌಲ್ಯಮಾಪನ
ಮಂಡ್ಯ: ಇಲ್ಲಿನ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) (Women’sGovernment College), ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದೆ. 2025-26 ನೇ ಸಾಲಿನ ವಿವಿಧ ಪದವಿ ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನ ದಾಖಲೆ ಸಮಯದಲ್ಲಿ ಮುಗಿಸಿ ಕೊನೆಯ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸುವ ಮೂಲಕ ರಾಜ್ಯದ ಗಮನ ಸೆಳೆದಿದೆ. ಸರ್ಕಾರಿ ಸಂಸ್ಥೆಯೊಂದು ಇಷ್ಟೊಂದು ವೇಗವಾಗಿ ಫಲಿತಾಂಶ ನೀಡಿರುವುದು ಕಾಲೇಜಿನ ಪರಿಶ್ರಮದ ಹೆಗ್ಗುರುತಾಗಿದೆ.
ಕಾಲೇಜಿನ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ, ಬಿಸಿಎ, ಬಿಎಫ್ಎಸ್ಐ, ಇ-ಕಾಮರ್ಸ್ ಪದವಿ ಪರೀಕ್ಷೆಗಳು ಕಳೆದ ಜನವರಿ 2 ರಿಂದ ಜನವರಿ 31 ರ ವರೆಗೆ ನಡೆದಿದ್ದವು ಪರೀಕ್ಷೆಗಳು ಜನವರಿ 31 ರಂದು ಮುಕ್ತಾಯಗೊಂಡಿದ್ದು ಅದೇ ದಿನ ಸಂಜೆ 4:00 ಕ್ಕೆ ಮೌಲ್ಯಮಾಪನ ಪ್ರಕ್ರಿಯೆಯನ್ನ ಯಶಸ್ವಿಯಾಗಿ ಮುಕ್ತಾಯಗೊಳಿಸಲಾಯಿತು. ವಿಶೇಷವೆಂದರೆ ಮೌಲ್ಯಮಾಪನ ಮುಗಿದ ಕೇವಲ 1 ಗಂಟೆಯಲ್ಲಿ (ಜನವರಿ 31ರ ಸಮಯ 5:00) ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗುರುರಾಜ ಪ್ರಭು ಕೆ. ಅವರು ಫಲಿತಾಂಶವನ್ನ ಬಿಡುಗಡೆ ಮಾಡಿದರು. ಇದನ್ನೂ ಓದಿ: ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ
ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಶಿಸ್ತುಬದ್ದ ಕೆಲಸ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದಾಗಿ ಈ ಅಸಾಧಾರಣ ಸಾಧನೆಯನ್ನ ನಮ್ಮ ಸರ್ಕಾರಿ ಪದವಿ ಕಾಲೇಜಿನಿಂದ ಸಾಧ್ಯವಾಗಿದೆ. ಈ ಕಾರ್ಯವನ್ನು ಪರೀಕ್ಷಾ ನಿಯಂತ್ರಣಾಧಿಕಾರಿ ಡಾ. ರವಿಕಾಂತ್ ಲಂಬಾಣಿ ಅವರು ಮತ್ತು ತಂಡ ಪರೀಕ್ಷೆ ಆರಂಭದಿಂದ ಮುಕ್ತಾಯದವರೆಗೂ ಸತತ ಪರಿಶ್ರಮ, ತಾಳ್ಮೆ, ಜಾಣ್ಮೆ, ಅತ್ಯಂತ ಶಿಸ್ತಿನಿಂದ ಶ್ರಮಿಸಿದ ಫಲವಾಗಿ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಲು ಸಹಕಾರಿಯಾಯಿತೆಂದು ಕಾಲೇಜು ಅಧ್ಯಾಪಕರು ಹಾಗೂ ಸಿಬ್ಬಂದಿಗಳನ್ನು ಅವರನ್ನು ಶ್ಲಾಘಿಸಿಲಾಗಿದೆ. ಇದನ್ನೂ ಓದಿ: ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್!
ಈ ರೀತಿಯ ಫಲಿತಾಂಶ ಪ್ರಕಟಣೆ ವಿದ್ಯಾರ್ಥಿಗಳು, ಕಾಲೇಜಿನ ಸರ್ವೋತೋಮುಖ ಅಭಿವೃದ್ಧಿಗೆ ಮುನ್ನುಡಿಯಾಗಲಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಕಾರ್ಯವನ್ನು ಯಶಸ್ವಿಯಾಗಿ ಮುಂದುವರಿಸುತ್ತೇವೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಸುಗಮ ಓದಿಗೆ ಈ ಫಲಿತಾಂಶ ಸಕಾರಾತ್ಮಕ ಪರಿಣಾಮ ಉಂಟುಮಾಡುತ್ತದೆಂದು ಸಂತಸ ವ್ಯಕ್ತಪಡಿಸಲಾಗಿದೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ



