ಮಂಡ್ಯ: ರೈತಾಪಿ ವರ್ಗದ ಯುವಕರು ಮದುವೆಯಾಗಲು ಹೆಣ್ಣು ಕೇಳಲು ಹೋದ್ರೆ ಹೆಣ್ಣೆತ್ತವರು ಹುಡುಗ ಏನು ಮಾಡ್ಕೊಂಡು ಇದ್ದಾನೆ ಅಂದಾಗ ರೈತನಾಗಿದ್ದಾನೆ ಅಂದ್ರೆ ಸಾಕು ಮೂಗು ಮುರಿಯುತ್ತಾರೆ. ಹೀಗಾಗಿ ಯುವಕರು ಮದುವೆಯಾಗಲು ಹೆಣ್ಣು ಸಿಗದೇ ಇದೀಗ ವಧು-ವರರ ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಾಳ ಸಂಗಾತಿಗಾಗಿ ಕ್ಯೂ ನಿಂತಿದ್ದಾರೆ.
Advertisement
ರೈತ (Farmer) ದೇಶದ ಬೆನ್ನೆಲುಬು, ರೈತನಿದ್ದರೆ ಮಾತ್ರ ದೇಶ ಸುಭೀಕ್ಷವಾಗಿ ಇರುತ್ತೆ ಅಂತಾ ಹೇಳ್ತಾರೆ. ಆದರೆ ಇದೀಗ ಅಂತಹ ರೈತ ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ. ಮದುವೆಯಾಗಲು ರೈತ ಹೆಣ್ಣು ಕೇಳಲು ಹೋದ್ರೆ, ಹೆಣ್ಣೆತ್ತವರು ನಾವು ರೈತರಿಗೆ ನಮ್ಮ ಮಗಳನ್ನು ಕೊಡುವುದಿಲ್ಲ. ನಾವು ಪಟ್ಟಣದಲ್ಲಿ ಕೆಲಸದಲ್ಲಿ ಇರುವವರಿಗೆ ನಮ್ಮ ಮಗಳನ್ನು ಕೊಡ್ತೀವಿ ಎನ್ನುವವರ ಸಂಖ್ಯೆಯೇ ಹೆಚ್ಚಾಗಿದೆ. ಹೀಗಾಗಿ ರೈತ ಯುವಕರು (Farmer Marriage) ದಾಂಪತ್ಯ ಜೀವನ ತುಳಿಯಲು ಹುಡುಗಿ ಸಿಗದೇ ಮಂಡ್ಯ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪರದಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆಗೆ ಎಂದ್ರೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಡೆದ ಒಕ್ಕಲಿಗ ವಧು-ವರ ಸಮಾವೇಶ. ಇದನ್ನೂ ಓದಿ: ಮಂಡ್ಯದಲ್ಲಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಬಲಿ
Advertisement
Advertisement
ಭಾನುವಾರ ಆದಿಚುಂಚನಗಿರಿ (Adichunchanagiri) ಯಲ್ಲಿ ನಡೆದ ವಧು-ವರರ ಸಮಾವೇಶದಲ್ಲಿ ಮಂಡ್ಯ ಜಿಲ್ಲೆ ಸೇರಿದಂತೆ ರಾಜ್ಯದ ನಾನ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ವಧು-ವರರ ಆಯ್ಕೆಗೆ ಬಂದಿದ್ದಾರೆ. ಸುಮಾರು 12 ಸಾವಿರ ಮಂದಿ ಸಮಾವೇಶದಲ್ಲಿ ರಿಜಿಸ್ಟರ್ ಆಗಿದ್ದು, ಈ ಪೈಕಿ 250 ಮಂದಿ ಹುಡುಗಿಯರು ವರನಿಗಾಗಿ ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಉಳಿದ 11,750 ಮಂದಿ ಯುವಕರು ದಾಂಪತ್ಯ ಜೀವನಕ್ಕೆ ಕಾಲಿಡಲು ವಧುವಿಗಾಗಿ ಹುಡುಕಾಟ ನಡೆಸಲು ರಿಜಿಸ್ಟರ್ ಮಾಡಿಕೊಂಡಿದ್ದಾರೆ. ಈ ಪೈಕಿ ಅತೀ ಹೆಚ್ಚು ರೈತ ಸಮುದಾಯದ ಯುವಕರೇ ಇರುವುದು ಆಶ್ಚರ್ಯದ ಸಂಗತಿಯಾಗಿದೆ.
Advertisement
ಒಟ್ಟಾರೆ ರೈತನೇ ದೇಶದ ಬೆನ್ನೆಲುಬು ಎಂದು ಹೇಳುವಾಗ ರೈತನ ಆರ್ಥಿಕತೆ ಸುಧಾರಿಸಲು ಸರ್ಕಾರ ಸರಿಯಾದ ಕಾರ್ಯಕ್ರಮಗಳನ್ನು ಜಾರಿಗೆ ತಾರದ ಕಾರಣ ರೈತರ ಪರಿಸ್ಥಿತಿ ಈ ಮಟ್ಟಕ್ಕೆ ತಲುಪಿದೆ. ಮದುವೆಯಾಗಲು ರೈತರಿಗೆ ಹೆಣ್ಣು ಸಿಗುತ್ತಿಲ್ಲ ಎಂದ್ರೆ ರೈತರ ಸ್ಥಿತಿ ಎಷ್ಟರ ಮಟ್ಟಿಗೆ ಇದೆ ಎಂದು ಗೊತ್ತಾಗುತ್ತದೆ.