– ರೆಬೆಲ್ ಸ್ಟಾರ್ ಅಂಬರೀಶ್ ನಟನೆಯ 27 ಸಿನಿಮಾಗಳ ನಿರ್ದೇಶನ
ಬೆಂಗಳೂರು: `ಮಂಡ್ಯದ ಗಂಡು’ ಸಿನಿಮಾ ನಿರ್ದೇಶಿಸಿದ್ದ ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ಎಟಿ ರಘು (AT Raghu) ಗುರುವಾರ ರಾತ್ರಿ ನಿಧನರಾಗಿದ್ದಾರೆ.
76 ವರ್ಷದ ರಘು ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಜೊತೆಗೆ ಡಯಾಲಿಸಿಸ್ ಮಾಡಿಸಿಕೊಳುತ್ತಿದ್ದರು. ಗುರುವಾರ ರಾತ್ರಿ 9:20ರ ಸುಮಾರಿಗೆ ಕೊನೆಯುಸಿರೆಳೆದಿದ್ದು, ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ. ಸದ್ಯ ಆರ್‌ಟಿ ನಗರದ ಮಠದಹಳ್ಳಿಯಲ್ಲಿ ಪಾರ್ಥಿವ ಶರೀರ ಇಡಲಾಗಿದ್ದು, ಇಂದು ಮದ್ಯಾಹ್ನ 2-3 ಗಂಟೆಯೊಳಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ಇದನ್ನೂ ಓದಿ: ದಿನ ಭವಿಷ್ಯ 21-03-2025
ಕನ್ನಡ ಚಿತ್ರರಂಗದಲ್ಲಿ ಬರಹಗಾರ ಹಾಗೂ ಖ್ಯಾತ ನಿರ್ದೇಶಕರಾಗಿದ್ದ ಇವರು, ಸಾಹಸ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳುತ್ತಿದ್ದರು. `ಮಂಡ್ಯದ ಗಂಡು’ ಸಿನಿಮಾ ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ನಿರ್ದೇಶಿಸಿದ್ದರು. ಇನ್ನೂ ರೆಬೆಲ್ ಸ್ಟಾರ್ ಅಂಬರೀಶ್ (Rebel Star Ambarish) ನಟನೆಯ 27 ಸಿನಿಮಾಗಳನ್ನು ನಿರ್ದೇಶಿದ್ದರು.
ಮಂಡ್ಯದ ಗಂಡು (Mandyada Gandu) ಸಿನಿಮಾ ಸೇರಿದಂತೆ ಕನ್ನಡದ ಮಿಡಿದ ಹೃದಯಗಳು, ಜೈಲರ್ ಜಗನ್ನಾಥ್, ಬೇಟೆಗಾರ, ಧರ್ಮ ಯುದ್ಧ, ನ್ಯಾಯ ನೀತಿ ಧರ್ಮ ಇನ್ನಿತರ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ 21-03-2025