ಮಂಡ್ಯ: ಕಳೆದ 2 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿಡುವು ಕೊಟ್ಟಿದ್ದ ವರುಣದೇವ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಪರಿಣಾಮ ಕಾವೇರಿ ಒಡಲಾದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ (KRS Dam) ಸಂಪೂರ್ಣ ಭರ್ತಿಯಾಗಿದೆ. ಇದರಿಂದ ಹಳೇ ಮೈಸೂರು ಭಾಗದ ಜನರಿಗೆ ಮತ್ತು ಕಾವೇರಿ ಕೊಳ್ಳದ ರೈತರಲ್ಲಿ (Farmers) ಮಂದಹಾಸ ಮನೆ ಮಾಡಿದೆ.
124.80 ಗರಿಷ್ಠ ಸಾಮರ್ಥ್ಯದ ಕೆಆರ್‌ಎಸ್ ಜಲಾಶಯ ಎರಡು ವರ್ಷಗಳ ಬಳಿಕ ಸಂಪೂರ್ಣವಾಗಿ ಭರ್ತಿಯಾಗಿದೆ. 1 ಕಡೆ ಕಾವೇರಿ ಒಡಲು ಭರ್ತಿಯಾಗಿರೋದು ಸಂತಸದ ವಿಚಾರವಾದ್ರೆ, ಇನ್ನೊಂದೆಡೆ ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ (flood concern) ಎದುರಾಗಿದೆ. ಇದನ್ನೂ ಓದಿ: ಮುಡಾ ಸೈಟ್ ಕೋಲಾಹಲ – ವಿಧಾನಸೌಧಲ್ಲಿ ಬಿಜೆಪಿ, ಜೆಡಿಎಸ್ ಅಹೋರಾತ್ರಿ ಧರಣಿ
ಸದ್ಯ ಕೆಆರ್‌ಎಸ್ ಡ್ಯಾಂಗೆ 41,099 ಕ್ಯುಸೆಕ್ ಒಳಹರಿವು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇನ್ನೂ ಎರಡು ತಿಂಗಳು ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚೆನ್ನಾಗಿ ಬೀಳುವ ಸಾಧ್ಯತೆ ಇದೆ. ಈ ಕಾರಣ ಡ್ಯಾಂಗೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಅಷ್ಟೇ ಪ್ರಮಾಣದಲ್ಲಿ ಹೊರಹರಿವು ಬಿಡಲಾಗುತ್ತದೆ. ಹೀಗಾಗಿಯೇ ಮಂಡ್ಯ ಜಿಲ್ಲಾಡಳಿತ ಕಾವೇರಿ ನದಿ ಪಾತ್ರದ ಜನರಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವ ಸಮಯದಲ್ಲಾದರೂ ಅಧಿಕ ಪ್ರಮಾಣದಲ್ಲಿ ನದಿಗೆ ಹರಿಸಲಾಗುತ್ತದೆ. ಹೀಗಾಗಿ ಜನರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುಂದಾಗಬೇಕು. ಅಲ್ಲದೇ ನದಿ ದಡಕ್ಕೆ ಯಾರು ಸಹ ಹೋಗಬಾರದು ಎಂದು ಮಂಡ್ಯ ಡಿಸಿ ಡಾ.ಕುಮಾರ್ ಆದೇಶಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳಿಗೆ ಎಸ್ಸಿ-ಎಸ್ಟಿ ಹಣ ಬಳಕೆ ಆರೋಪ – ಸರ್ಕಾರದ ವಿರುದ್ಧ ದಲಿತ ಸಂಘ ಪ್ರತಿಭಟನೆ
ಕಾವೇರಿ ಮಾತೆಯ ಒಡಲು ತುಂಬಿರೋದು ಕಾವೇರಿ ಮಕ್ಕಳಲ್ಲಿ ಸಂತಸ ತಂದಿದೆ. ಇನ್ನೊಂದೆಡೆ ಪ್ರವಾಹದ ಆತಂಕ ಸಹ ಎದುರಾಗಿದೆ. ಜನರು ಮಳೆಯ ಆರ್ಭಟ ಕಡೆಮೆ ಆಗುವವರೆಗೆ ನದಿಯಿಂದ ದೂರ ಇದ್ದು ಸುರಕ್ಷಿತವಾಗಿ ಇರಬೇಕು ಅಂತ ಅಧಿಕಾರಿಗಳು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆ ಅಡಿ ಸರ್ಕಾರದಿಂದ ಸಾರಿಗೆ ಇಲಾಖೆಗೆ 1,413 ಕೋಟಿ ರೂ. ಬಾಕಿ – ರಾಮಲಿಂಗಾರೆಡ್ಡಿ