Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆ ಮಾರಾಟಕ್ಕಿದೆ: ಕಾಡುವ ದೆವ್ವಕ್ಕೂ ನಗುವಿನ ಕಚಗುಳಿಯಿಡೋ ಚಿತ್ರ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮನೆ ಮಾರಾಟಕ್ಕಿದೆ: ಕಾಡುವ ದೆವ್ವಕ್ಕೂ ನಗುವಿನ ಕಚಗುಳಿಯಿಡೋ ಚಿತ್ರ!

Bengaluru City

ಮನೆ ಮಾರಾಟಕ್ಕಿದೆ: ಕಾಡುವ ದೆವ್ವಕ್ಕೂ ನಗುವಿನ ಕಚಗುಳಿಯಿಡೋ ಚಿತ್ರ!

Public TV
Last updated: November 15, 2019 8:16 pm
Public TV
Share
2 Min Read
mane maratakkide 3
SHARE

ಬೆಂಗಳೂರು: ಪ್ರತಿ ಪ್ರೇಕ್ಷಕರೂ ಕೂಡಾ ಸಿನಿಮಾ ನೋಡೋ ಪ್ರಧಾನ ಉದ್ದೇಶ ಮನೋರಂಜನೆ. ಅದರಲ್ಲಿಯೂ ಹಾಸ್ಯ ಸನ್ನಿವೇಶಗಳಿಗೆ ಮನಸೋಲದವರೇ ಇಲ್ಲ. ಹಾಗಿರುವಾಗ ಒಂದಿಡೀ ಚಿತ್ರವೇ ಕಾಮಿಡಿಮಯವಾಗಿದ್ದರೆ ಅದರತ್ತ ಪ್ರೇಕ್ಷಕರು ಆಕರ್ಷಿತರಾಗದಿರಲು ಸಾಧ್ಯವೇ ಇಲ್ಲ. ಈ ಕಾರಣದಿಂದಲೇ ಅಗಾಧ ನಿರೀಕ್ಷೆ ಮೂಡಿಸಿದ್ದ ‘ಮನೆ ಮಾರಾಟಕ್ಕಿದೆ’ ಚಿತ್ರವೀಗ ಬಿಡುಗಡೆಯಾಗಿದೆ. ಮಾರಾಟಕ್ಕಿರೋ ಮನೆ, ಅದಕ್ಕೆ ಥರ ಥರದ ಅನಿವಾರ್ಯತೆ, ವ್ಯಕ್ತಿತ್ವದ ಪೋಷಾಕು ತೊಟ್ಟು ಎಂಟ್ರಿ ಕೊಡುವ ಆಸಾಮಿಗಳೊಂದಿಗೆ ಭರಪೂರ ನಗುವಿನ ಮ್ಯಾಜಿಕ್ಕನ್ನು ನಿರ್ದೇಶಕ ಮಂಜು ಸ್ವರಾಜ್ ಮಾಡಿದ್ದಾರೆ. ಇದರಲ್ಲಿನ ಕಾಮಿಡಿ ಕಿಕ್ ಎಂಥಾದ್ದಿದೆಯೆಂದರೆ, ಅದು ಪ್ರೇಕ್ಷಿಕರಿಗೆ ಮಾತ್ರವಲ್ಲದೇ ಕಾಟ ಕೊಡಲು ಬಂದ ದೆವ್ವಗಳಿಗೂ ನಗೆಯ ಕಚಗುಳಿ ಇಡುವಂತಿದೆ!

Mane Maratakkide B

ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಒಂದೆಡೆ ಸೇರಿದ್ದಾರೆಂದರೆ ಅಲ್ಲಿ ನಗುವಿನ ಒರತೆ ಹುಟ್ಟಿಕೊಳ್ಳೋದು ಗ್ಯಾರೆಂಟಿ ಎಂಬ ನಂಬಿಕೆ ಎಲ್ಲರಲ್ಲಿಯೂ ಇತ್ತು. ಅದನ್ನು ನಿಜವಾಗಿಸುವಂತೆಯೇ ನಿರ್ದೇಶಕರು ಪಾತ್ರಗಳನ್ನು ರೂಪಿಸಿದ್ದಾರೆ. ಮನೋರಂಜನೆಯೇ ಪ್ರಧಾನವಾಗಿರುವ ಕಥೆ, ಅದಕ್ಕೆ ಪೂಕವಾದ ಪಾತ್ರಗಳು ಮತ್ತು ಕ್ಷಣ ಕ್ಷಣವೂ ನಗೆಯುಕ್ಕಿಸುವಂತೆ ಪೋಣಿಸಿರುವ ಹಾಸ್ಯ ಸನ್ನಿವೇಶಗಳೊಂದಿಗೆ ಮಾರಾಟಕ್ಕಿರೋ ಮನೆ ತುಂಬಾ ನಗು ಹರಿಡಿಕೊಂಡಿದೆ. ಅದು ಪ್ರತಿ ನೋಡುಗರ ಮೈ ಮನಸುಗಳನ್ನೂ ವ್ಯಾಪಿಸಿಕೊಂಡು ಮುದಗೊಳಿಸುವಷ್ಟು ಶಕ್ತವಾಗಿದೆ.

Mane Maratakkide Main

ವಿದೇಶದಲ್ಲಿ ನೆಲೆಸಿದವನೊಬ್ಬನಿಗೆ ಊರಲ್ಲಿ ಅಪ್ಪ ಅಮ್ಮನಿರೋ ಮನೆಯನ್ನು ಮಾರಾಟ ಮಾಡೋ ಹಂಬಲ. ಆದರೆ ಅದರೊಳಗಿನ ದೆವ್ವ ಭೂತಗಳ ಕಾಟ ಊರಿಡೀ ತುಂಬಿಕೊಂಡು ಯಾರೆಂದರೆ ಯಾರೂ ಅದನ್ನು ಖರೀದಿ ಮಾಡೋ ಧೈರ್ಯ ತೋರೋದಿಲ್ಲ. ಈ ಕಾರಣದಿಂದಲೇ ಮನೆ ಮಾಲೀಕರು ಇದರೊಳಗಿನ ದೆವ್ವ ಓಡಿಸಿ ಮನೆ ಮಾರಾಟ ಮಾಡಿ ಕೊಟ್ಟವರಿಗೆ ಲಕ್ಷಗಟ್ಟಲೆ ಬಂಪರ್ ಬಹುಮಾನ ಘೋಷಣೆ ಮಾಡುತ್ತಾರೆ. ಬದುಕಿನ ನಾನಾ ಜಂಜಡಗಳಲ್ಲಿ ಮುಳುಗಿದ್ದ ನಾಲ್ಕು ಮಂದಿ ಆ ಸವಾಲನ್ನು ಸ್ವೀಕರಿಸಿ ದೆವ್ವವಿರೋ ಮನೆ ಪ್ರವೇಶಿಸಿದ ನಂತರ ಸಂಭವಿಸೋ ವಿದ್ಯಮಾನಗಳೇ ಈ ಸಿನಿಮಾದ ಜೀವಾಳ.

mane maratakkide

ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಹೇಗಾದರೂ ಮಾಡಿ ಕಾಸು ಹೊಂದಿಸೋ ದರ್ದು ಹೊಂದಿರೋ ಪಾತ್ರಗಳಿಗೆ ಪರಕಾಯ ಪ್ರವೇಶ ಮಾಡಿದಂತೆ ನಟಿಸಿದ್ದಾರೆ. ಅವರೆಲ್ಲರ ಪಾತ್ರಗಳಿಗೂ ಒಂದು ಹಿನ್ನೆಲೆ ಇದೆ. ಅವರಿಗೆ ಬಂದೊದಗಿದ ಕಾಸಿನ ಅನಿವಾರ್ಯತೆಗಳನ್ನು ನಿರ್ದೇಶಕರು ಮಜವಾಗಿಯೇ ತೋರಿಸಿದ್ದಾರೆ. ಇನ್ನುಳಿದಂತೆ ಶ್ರುತಿ ಹರಿಹರನ್ ಮತ್ತು ಕಾರುಣ್ಯಾ ರಾಮ್ ಪಾತ್ರಗಳೂ ಮೋಹಕವಾಗಿವೆ. ಒಂದು ಸಿನಿಮಾದ ಒಂದಷ್ಟು ಕಾಮಿಡಿ ಸನ್ನಿವೇಶಗಳನ್ನೇ ಸಮರ್ಥವಾಗಿ ನಿಭಾಯಿಸೋದು ಕಷ್ಟ. ಆದರೆ ನಿರ್ದೇಶಕ ಮಂಜು ಸ್ವರಾಜ್ ಒಂದಿಡೀ ಚಿತ್ರವನ್ನೇ ಭರಪೂರ ನಗುವಲ್ಲಿ ಮಿಂದೇಳುವಂತೆ ಕಟ್ಟಿ ಕೊಟ್ಟಿರೋದು ಇಡೀ ಸಿನಿಮಾದ ಪ್ಲಸ್ ಪಾಯಿಂಟ್. ನೀವೂ ಒಮ್ಮೆ ಮಾರಾಟಕ್ಕಿರೋ ದೆವ್ವದ ಮನೆಯನ್ನು ಕಣ್ತುಂಬಿಕೊಳ್ಳಿ. ಖಂಡಿತಾ ಭರ್ಜರಿ ಕಾಮಿಡಿ ನಗವಿನಲೆಯಲ್ಲಿ ಮಿಂದೇಳುವಂತೆ ಮಾಡುತ್ತದೆ.

ರೇಟಿಂಗ್: 3.5/5

TAGGED:ChikkannaDirector Manju Swarajkannada cinemaKuri PratapMane MaratakkidePublic TVsandalwoodSruthi Hariharanಕನ್ನಡ ಸಿನಿಮಾಕುರಿ ಪ್ರತಾಪ್ಚಿಕ್ಕಣ್ಣನಿರ್ದೇಶಕ ಮಂಜು ಸ್ವರಾಜ್ಪಬ್ಲಿಕ್ ಟಿವಿಮನೆ ಮಾರಾಟಕ್ಕಿದೆಶ್ರುತಿ ಹರಿಹರನ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Udupi Husband Suicide
Crime

ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲಿ ಪತಿ ಸೂಸೈಡ್ – ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಯಹತ್ಯೆ ಆರೋಪ

Public TV
By Public TV
3 minutes ago
Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
8 hours ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
8 hours ago
02 19
Big Bulletin

ಬಿಗ್‌ ಬುಲೆಟಿನ್‌ 30 March 2026 ಭಾಗ-2

Public TV
By Public TV
9 hours ago
01 20
Big Bulletin

ಬಿಗ್‌ ಬುಲೆಟಿನ್‌ 30 March 2026 ಭಾಗ-1

Public TV
By Public TV
9 hours ago
Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?