ವಿಜಯಪುರ: ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಂಗಳಾದೇವಿಯವರು ಪಕ್ಷದ ನಾಯಕರ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ಅವರು ತಮಗೇ ಕೊಟ್ಟ ಮಾತನ್ನು ತಪ್ಪಿದ್ದಾರೆ. ಜಿಲ್ಲೆಗೆ ಒಬ್ಬ ಮಹಿಳಾ ಅಭ್ಯರ್ಥಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ತಿಳಿಸಿದ್ದರು. ಅವರ ಆಶ್ವಾಸನೆ ಮೇರೆಗೆ 2004 ರಿಂದಲೂ ಸತತವಾಗಿ ದುಡಿದು ಪಕ್ಷವನ್ನು ಬಲಪಡಿಸಿದ್ದೇವೆ ಎಂದರು.
Advertisement
Advertisement
ಕೇವಲ ಚುನಾವಣೆಯಲ್ಲಿ ಗೆಲುವಿನ ಒಂದೇ ಕಾರಣಕ್ಕಾಗಿ ಬೇರೆ ಕ್ಷೇತ್ರದ ವ್ಯಕ್ತಿಗೆ ಟಿಕೆಟ್ ನೀಡಿದ್ದಾರೆ. ಪಕ್ಷದ ಸಿದ್ಧಾಂತಗಳೇ ಗೊತ್ತಿಲ್ಲದ ಅಭ್ಯರ್ಥಿಗೆ ಟಿಕೆಟ್ ನೀಡಿ ವಂಚನೆ ಮಾಡಿದ್ದಾರೆ. ಪಕ್ಷಕ್ಕಾಗಿ ಸರ್ಕಾರಿ ನೌಕರಿ ಹಾಗೂ ತನ್ನ ಮಗನ ಜೀವನವನ್ನು ಬಲಿ ಕೊಟ್ಟು ಪಕ್ಷದ ಬೆಳವಣಿಗೆ ಮಾಡಿದವರಿಗೆ ಮೋಸ ಮಾಡಿದ್ದಾರೆ. ಸದ್ಯ ತಮ್ಮ ರಾಜಕೀಯ ಜೀವನ ಮುಕ್ತಾಯಗೊಳಿಸಲು ಚಿಂತನೆ ನಡೆಸಿದ ನಡಹಳ್ಳಿ ಸೋಲಿಸುವುದು ನನ್ನ ಗುರಿಯಾಗಿದೆ. ಕ್ಷೇತ್ರದಲ್ಲಿ ನಡಹಳ್ಳಿ ಠೇವಣಿ ಕಳೆದುಕೊಳ್ಳಲಿದ್ದಾರೆ. ತಮ್ಮ ರಾಜಕೀಯ ವೃತ್ತಿ ಜೀವನದ ಮುಂದಿನ ನಡೆಯನ್ನು ತಮ್ಮ ಕಾರ್ಯಕರ್ತರೊಂದಿಗೆ ಚರ್ಚಿಸಿ ಇನ್ನೆರಡು ದಿನದಲ್ಲಿ ಸ್ಪಷ್ಟಪಡಿಸುತ್ತೇನೆ ಎಂದು ತಿಳಿಸಿದರು.