ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಬಾಂಬರ್ ಅರೆಸ್ಟ್ ಆಗಿದ್ದಾನೆ.
ಮಣಿಪಾಲ ಮೂಲದ ಆದಿತ್ಯ ರಾವ್ ಬಂಧಿತ ಆರೋಪಿ. ಇಂದು ಬೆಳಗ್ಗೆ ಆದಿತ್ಯ ರಾವ್ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರ ಕಚೇರಿಗೆ ಆಗಮಿಸಿ ಶರಣಾಗಿದ್ದ. ಈಗ ಪೊಲೀಸರು ಈತನನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.
Advertisement
ಯಾರು ಈ ಆದಿತ್ಯ ರಾವ್?
ಉಡುಪಿಯ ಮಣಿಪಾಲ ಮೂಲದ ಎಂಜಿನಿಯರ್ ಆಗಿರುವ ಆದಿತ್ಯ ರಾವ್ ಈ ಹಿಂದೆಯೂ ಹುಸಿಬಾಂಬ್ ಕರೆ ಮಾಡಿ ಜೈಲು ಶಿಕ್ಷೆ ಅನುಭವಿಸಿದ್ದ. 2012ರಲ್ಲಿ ಖಾಸಗಿ ಬ್ಯಾಂಕಲ್ಲೂ ಕೆಲಸ ಮಾಡಿದ್ದ ಈತ ಬೆಂಗಳೂರಿನಲ್ಲಿ ಈ ಹಿಂದೆ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಬೆದರಿಕೆ ಹಾಕಿದ್ದ. ಹುಸಿಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ 9 ತಿಂಗಳು ಜೈಲುವಾಸ ಅನುಭವಿಸಿದ್ದ. ಜೈಲುವಾಸ ಬಳಿಕ ಕೆಲಸ ಸಿಗದೇ ಮಂಗಳೂರಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಸಿಗದ್ದಕ್ಕೆ ಬೆದರಿಕೆ ಕರೆ ಮಾಡಿದ್ದ ಬಾಂಬರ್ ಈಗ ಬಾಂಬ್ ಇಟ್ಟ
Advertisement
Advertisement
Advertisement