ಮಂಗಳೂರು: ಚಾರ್ಮಾಡಿ ಘಾಟ್‍ನಲ್ಲಿ ವರುಣನ ಅರ್ಭಟ ಶುರುವಾಗಿದ್ದು, ಈ ಭಾಗದ ಜನರಿಗೆ ಆತಂಕ ಹೆಚ್ಚಾಗುವಂತೆ ಮಾಡಿದೆ.
ಚಾರ್ಮಾಡಿ ಘಾಟ್‍ನಲ್ಲಿ ಮಳೆ ಬರುತ್ತಿರುವ ಕಾರಣ, ಚಾರ್ಮಾಡಿಯ ಮೃತ್ಯುಂಜಯ ಹೊಳೆಯಲ್ಲಿ ನೀರಿನ ಒಳ ಹರಿವು ಜಾಸ್ತಿಯಾಗಿದೆ. ಈ ಕಾರಣದಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಇದನ್ನು ಓದಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ-ಕೊಯ್ನಾದಿಂದ ನೀರು ಬಿಡುಗಡೆ
Advertisement
Advertisement
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರದೇಶದಲ್ಲಿ ಮಳೆಯ ಅರ್ಭಟ ಮತ್ತೆ ಶುರುವಾದ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಮನೆ ಬಿಟ್ಟು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಈ ಹಿಂದೆ ಸುರಿದ ಭಾರೀ ಮಳೆಯಿಂದ ಗುಡ್ಡ ಕುಸಿತ ಉಂಟಾಗಿ ಚಾರ್ಮಾಡಿ ಘಾಟ್‍ನ ರಸ್ತೆ ಸಂಚಾರವನ್ನು ತಡೆಹಿಡಿಯಲಾಗಿತ್ತು.