ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಆರಂಭವಾಗಿದ್ದ ಹಿಜಬ್ ವಿವಾದ ಇನ್ನೂ ತಾರ್ಕಿಕ ಅಂತ್ಯ ಕಂಡಿಲ್ಲ. ಈ ನಡುವೆ ಹಂಪನಕಟ್ಟೆಯಲ್ಲಿರುವ ಡಿಗ್ರಿ ಕಾಲೇಜಿನಲ್ಲಿ ವೀರ ಸಾವರ್ಕರ್ ಹೆಸರಿನಲ್ಲಿ ಮತ್ತೊಂದು ವಿವಾದ ಆರಂಭವಾಗಿದೆ.
ಮಂಗಳೂರು ವಿಶ್ವವಿದ್ಯಾಲಯ ಘಟಕ ಕಾಲೇಜಿನ ತರಗತಿಯೊಂದರಲ್ಲಿ ವಿನಾಯಕ ದಾಮೋದರ ಸಾವರ್ಕರ್ ಭಾವಚಿತ್ರವನ್ನು ಅಳವಡಿಸಿರುವ ಘಟನೆ ಬೆಳಕಿಗೆ ಬಂದಿತ್ತು. ಇದನ್ನು ಕಾಲೇಜಿನ ಇತರೆ ಮುಸ್ಲಿಂ ವಿದ್ಯಾರ್ಥಿಗಳು ಪ್ರಾಂಶುಪಾಲೆಯ ಗಮನಕ್ಕೆ ತಂದಾಗ ಅದನ್ನು ತೆರವುಗೊಳಿಸಲಾಗಿತ್ತು. ಗುರುವಾರ ಕಾಲೇಜಿನಲ್ಲಿ ಹಿಂದೂ ವಿದ್ಯಾರ್ಥಿಗಳು ಈ ವಿಚಾರವಾಗಿ ಜಗಳ ತೆಗೆದು ಸಾವರ್ಕರ್ ಫೋಟೋ ಹಾಕಿದ್ದನ್ನು ಕಾಲೇಜಿನ ಆಡಳಿತ ಮಂಡಳಿಗೆ ಹೇಳಿದ್ದಾರೆ ಅಂತ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ರಾಜ್ಯಸಭೆಯಲ್ಲಿ 3 ಸ್ಥಾನ ಗೆದ್ದ ಬಿಜೆಪಿ – ಕಾಂಗ್ರೆಸ್ ಗುದ್ದು, ಭಿನ್ನರಿಂದ ದಳಪತಿಗೆ ಶಾಕ್
ಹಲ್ಲೆಗೊಳಗಾದ ವಿದ್ಯಾರ್ಥಿಗಳಿಗೆ ಸೂಕ್ತ ನ್ಯಾಯ ಸಿಗಬೇಕು. ಹಲ್ಲೆ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು. ಇದಕ್ಕೆಲ್ಲ ಕುಮ್ಮಕ್ಕು ನೀಡಿದ ಪ್ರಾಂಶುಪಾಲರನ್ನು ಅಮಾನತ್ತು ಮಾಡಬೇಕು ಅಂತ ಒತ್ತಾಯಿಸಲಾಗಿದೆ. ಇದನ್ನೂ ಓದಿ: ಸೋತು ಗೆದ್ದ ಸಿದ್ದರಾಮಯ್ಯ – ಬಿಜೆಪಿ 3, ಕಾಂಗ್ರೆಸ್‍ಗೆ 1 ಸ್ಥಾನ
ಸದ್ಯ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ತಕ್ಷಣ ಬಂಧಿಸದಿದ್ದರೆ ಮಂಗಳೂರು ವಿಶ್ವವಿದ್ಯಾನಿಲಯ ಚಲೋ ಹಮ್ಮಿಕೊಳ್ಳುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಸದ್ಯ ಇದು ಮುಂದೆ ಯಾವ ತಿರುವು ಪಡೆದುಕೊಳ್ಳುತ್ತದೆ ಕಾದುನೋಡಬೇಕಿದೆ.