ಮಂಗಳೂರು: ವಿದೇಶ (Foreign) ದಲ್ಲಿ ಉದ್ಯೋಗದಲ್ಲಿದ್ದ ಯುವತಿಯೊಬ್ಬಳು ಡೆತ್ ನೋಟ್ (Death Note) ಬರೆದಿಟ್ಟು ನೇಣಿಗೆ ಶರಣಾದ ಘಟನೆ ಮಂಗಳವಾರ ನಡೆದಿದೆ.
ಯುವತಿಯನ್ನು ಅಶ್ವಿನಿ ಬಂಗೇರ(25) (Ashwini Bangera Suicide) ಎಂದು ಗುರುತಿಸಲಾಗಿದ್ದು, ಈಕೆ ಮಂಗಳೂರು ಹೊರವಲಯದ ಕುಂಪಲ ಚಿತ್ರಾಂಜಲಿ ನಗರದ ನಿವಾಸಿ. ಅಶ್ವಿನಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಇದನ್ನೂ ಓದಿ: ಮುಂಬೈನಲ್ಲಿ ಡೆಡ್ಲಿ ಮರ್ಡರ್ – ಗೆಳತಿಯನ್ನು ಕೊಂದು ಕುಕ್ಕರ್‌ನಲ್ಲಿ ಕುದಿಸಿದ ಪ್ರಿಯತಮ
ಕುಂಪಲದಲ್ಲಿ ಸಂಗೀತ ಎಂಬವರಿಂದ ಅಶ್ವಿನಿ ಮನೆಯೊಂದನ್ನ ಖರೀದಿಸಿದ್ದಳು. ಜೂ.3 ರಂದು ಗೃಹ ಪ್ರವೇಶ (House Warming) ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದಳು. ಗೃಹ ಪ್ರವೇಶವಾದ ಐದೇ ದಿನದದಲ್ಲಿ ಅದೇ ಮನೆ ಕೋಣೆಯೊಳಗೆ ಅಶ್ವಿನಿ ನೇಣಿಗೆ ಶರಣಾಗಿದ್ದಾಳೆ.
ಇದೀಗ ಅಶ್ವಿನಿ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಅಶ್ವಿನಿ ಬರೆದ 24 ಪುಟಗಳ ಡೆತ್‍ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಿನಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿರುವ ಬಗ್ಗೆ ಉಲ್ಲೇಖ ಮಾಡಿದ್ದಾಳೆ. ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ತಿಳಿಸಿದ್ದಾಳೆ.
ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆ (Ullala Police Station) ಯಲ್ಲಿ ಪ್ರಕರಣ ದಾಖಲಾಗಿದೆ.