ಮಂಗಳೂರು: ನಗರದ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಸುಮಾರು 10.15ರ ಸುಮಾರಿಗೆ ಟಿಕೆಟ್ ಕೌಂಟರ್ ಹತ್ತಿರ ಸ್ಫೋಟಕ ವಸ್ತು ಪತ್ತೆ ಆಗಿದ್ದು, ಸದ್ಯ ಅದನ್ನು ಬಾಂಬ್ ನಿಷ್ಕ್ರಿಯ ವಾಹನದಲ್ಲಿ ಇರಿಸಿಕೊಂಡು ಸ್ಥಳಾಂತರ ಮಾಡಲಾಗುತ್ತಿದೆ.
ಕೆಂಜಾರು ಮೈದಾನಕ್ಕೆ ಬಾಂಬ್ ಪ್ರೂಫ್ ವಾಹನ ತಲುಪಿದ್ದು, ಕೆಲವೇ ಕ್ಷಣಗಳಲ್ಲಿ ಬಾಂಬ್ ಅನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. ಈಗಾಗಲೇ ಮರಳು ಮೂಟೆ ತುಂಬಲಾಗಿದ್ದು, ಮೈದಾನದಲ್ಲಿ ಜನಸಾಗರವೇ ನೆರೆದಿದೆ.
Advertisement
Advertisement
ಬಾಂಬ್ ಪ್ರಕರಣ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ, ಈ ರೀತಿ ಭಯ ಹುಟ್ಟಿಸುವ ಪ್ರಕ್ರಿಯೆ ಮೇಲಿಂದ ಮೇಲೆ ನಡೆಯುತ್ತಿವೆ. ಈ ರೀತಿಯ ಪ್ರಯತ್ನ ಹತ್ತಿಕ್ಕಲು ನಾವು ಕಟ್ಟೆಚ್ಚರ ವಹಿಸಿದ್ದೇವೆ ಎಂದರು. ಇದನ್ನೂ ಓದಿ: ಮಂಗ್ಳೂರಲ್ಲಿ ಪತ್ತೆಯಾಗಿದ್ದು 10 ಕೆಜಿ ತೂಕದ ಸಜೀವ ಬಾಂಬ್
Advertisement
ಮಂಗಳೂರು, ಬೆಂಗಳೂರು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. ಒಟ್ಟಾರೆಯಾಗಿ ಇದು ದೇಶದ್ರೋಹದ ಕೆಲಸವಾಗಿದೆ ಎಂದರು.