Connect with us

Dakshina Kannada

ಮಂಗಳೂರಿನ ಅಪಾರ್ಟ್‍ಮೆಂಟ್ ಕಾಂಪೌಂಡ್ ಮೇಲೆ ಲಷ್ಕರ್ ಜಿಂದಾಬಾದ್ ಬರಹ!

Published

on

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಉಗ್ರ ಸಂಘಟನೆಗಳ ಪರ ಗೋಡೆ ಬರಹವೊಂದು ಕಂಡು ಬಂದಿದ್ದು, ಚರ್ಚೆಗೆ ಕಾರಣವಾಗಿದೆ.

ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿರೋ ಅಪಾರ್ಟ್‍ಮೆಂಟ್ ಗೋಡೆಯ ಮೇಲೆ ಹ್ಯಾಷ್ ಟ್ಯಾಗ್ ಹಾಕಿ ‘ಲಷ್ಕರ್ ಜಿಂದಾಬಾದ್’ ಎಂದು ಕಿಡಿಗೇಡಿಗಳು ಬರೆದಿದ್ದಾರೆ.

ಕಾಂಪೌಂಡ್ ಮೇಲೆ `ಡು ನಾಟ್ ಫೋರ್ಸ್ ಅಸ್ ಟು ಇನ್ವೈಟ್ ತಾಲಿಬಾನ್ ಆ್ಯಂಡ್ ಲಷ್ಕರ್-ಇ-ತೊಯ್ಬಾ ಟು ಡೀಲ್ ವಿತ್ ಸಂಘೀಸ್ ಆ್ಯಂಡ್ ಮನ್ವೇದಿಸ್’ ಎಂದು ಇಂಗ್ಲೀಷ್‍ನಲ್ಲಿ ಬರೆಯಲಾಗಿದೆ. ಅಂದರೆ ಸಂಘಿಗಳು ಮತ್ತು ಮನುವಾದಿಗಳ ವಿರುದ್ಧ ಹೋರಾಟಕ್ಕೆ ಲಷ್ಕರ್-ಇ-ತೊಯ್ಬಾ, ತಾಲಿಬಾನ್ ಸಂಘಟನೆಗೆ ಆಹ್ವಾನಿಸಲು ನಮ್ಮನ್ನು ಪ್ರೇರೇಪಿಸಬೇಡಿ ಎಂದಾಗಿದೆ. ಈ ಮೂಲಕ ಲಷ್ಕರ್ ಉಗ್ರರನ್ನ ಕರೆಸುವುದಾಗಿ ಬೆದರಿಕೆ ಹಾಕಿದ್ದಾರೆ.

ಸ್ಥಳಕ್ಕೆ ಕದ್ರಿ ಪೊಲೀಸರು ಆಗಮಿಸಿದ್ದು ವಿವಾದಿತ ಬರಹದ ಮೇಲೆ ಪೇಂಟಿಂಗ್ ಮಾಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *

www.publictv.in