Connect with us

Dakshina Kannada

ಲವ್ ಜಿಹಾದ್ ಹೆಸರಲ್ಲಿ ಮತಾಂತರವಾಗ್ತಿರೋದನ್ನು ಕೊನೆಗಾಣಿಸುತ್ತೇವೆ: ಸಿಎಂ

Published

on

– ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು
– ಆರು ತಿಂಗಳಲ್ಲಿ ಕರಾವಳಿಯಲ್ಲಿ ಬದಲಾವಣೆ

ಮಂಗಳೂರು: ಲವ್ ಜಿಹಾದ್ ಹೆಸರಲ್ಲಿ ಮತಾಂತವಾಗುತ್ತಿದೆ. ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಈ ವ್ಯವಸ್ಥೆ ಕೊನೆ ಮಾಡುತ್ತೇವೆ. ಮತಾಂತರದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ 20 ವರ್ಷಗಳ ನಂತರ ರಾಜ್ಯಕಾರ್ಯಕಾರಿಣಿ ಸಭೆಯಾಗುತ್ತಿದೆ. ರಾಜ್ಯಾಧ್ಯಕ್ಷರಾದ ಬಳಿಕ ನಳಿನ್ ಕುಮಾರ್ ಕಟೀಲ್ ಪಕ್ಷ ಬಲಪಡಿಸಿದ್ದಾರೆ. ಎರಡು ವರ್ಷಗಳ ಬಳಿಕ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತದೆ. 2014 ರಲ್ಲಿ ಬಿಜೆಪಿ 104 ಸೀಟ್ ಗಳಿಸಿತ್ತು. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ 18 ಮಂದಿ ಆಡಳಿತ ಪಕ್ಷದ ಸದಸ್ಯರು ಬಿಜೆಪಿಗೆ ಸೇರಿದ್ದರು. 18 ಜನರ ಸಹಕಾರದಿಂದ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಕೋರ್ ಕಮಿಟಿ ಉದ್ಫಾಟನಾ ಸಮಾರಂಭದಲ್ಲಿ ಸ್ಮರಿಸಿದರು.

ಬಿಜೆಪಿ ಕಾರ್ಯಕರ್ತರು ಚುನಾವಣೆಯನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಅಭ್ಯರ್ಥಿಗಳ ಗೆಲುವಿಗೆ ಸಂಪೂರ್ಣ ಶ್ರಮವನ್ನು ಹಾಕಬೇಕು. ಬಿಜೆಪಿ ಕೋರ್ ಕಮಿಟಿ ಉದ್ಫಾಟನಾ ಸಭೆಯಲ್ಲಿ ಸಿಎಂ ಕಿವಿಮಾತು ಹೇಳಿದರು. ಇದೇ ವೇಳೆ ಆರ್.ಆರ್ ನಗರದಲ್ಲಿ 40 ಸಾವಿರ, ಶಿರಾದಲ್ಲಿ 25 ಸಾವಿರ ಮತಗಳ ಅಂತರದ ಗೆಲುವಾಗಲಿದೆ. ಕಾಂಗ್ರೆಸ್ ದಯನೀಯ ಸೋಲನ್ನು ಅನುಭವಿಸುತ್ತದೆ. 10ನೇ ತಾರೀಖು ಫಲಿತಾಂಶದಲ್ಲಿ ವಿಪಕ್ಷಗಳಿಗೆ ಉತ್ತರ ಸಿಗಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಹಣಕಾಸಿನ ವ್ಯವಸ್ಥೆ ಸುಧಾರಣೆಯಾಗುತ್ತಿದೆ. ಶಾಸಕರಿಗೆ 50 ಲಕ್ಷದ ಅನುದಾನ ಬಿಡುಗಡೆಯಾಗಲಿದೆ. ಮಂಗಳೂರು ನಗರ ಆಡಳಿತಕ್ಕೆ 125 ಕೋಟಿ ರೂ. ಅನುದಾನ ಸಿಗಲಿದೆ. ಈಗಾಗಲೇ 50 ಕೋಟಿ ಅನುದಾನ ಬಿಡುಗಡೆ ಮಾಡಿದ್ದೇನೆ. ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಉತ್ತಮ ಕೆಲಸವಾಗುತ್ತಿದೆ. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಮಟ್ಟ ಹಾಕಲಾಗುತ್ತಿದೆ. ಡ್ರಗ್ಸ್ ಮುಕ್ತ ರಾಜ್ಯಕ್ಕಾಗಿ ಬಿಗಿಯಾದ ಕ್ರಮ ಕೈಗೊಂಡಿದ್ದೇವೆ ಎಂದರು.

ಕರಾವಳಿಯಲ್ಲಿ ಆತಂರಿಕ ಭದ್ರತೆಗೆ ಪ್ರಾಶಸ್ತ್ಯ ಕೊಡಲು ನಿರ್ಧಾರ ಮಾಡಲಾಗಿದೆ. ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ. ಆರು ತಿಂಗಳಿನಲ್ಲಿ ಕರಾವಳಿಯಲ್ಲಿ ಬದಲಾವಣೆಯಾಗಲಿದೆ. ಸಾಗರದ ಅಲೆಗಳಿಂದ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಂಡಿದ್ದೇವೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸ್ಥಿತಿಯಲ್ಲಿದೆ. ಆದರೆ ಇನ್ನೂ ಹಲವು ತಿಂಗಳು ಕೊರೊನಾ ನಿಯಮ ಪಾಲಿಸಬೇಕಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸದಾನಂದ ಗೌಡ ಸೇರಿದಂತೆ ರಾಜ್ಯಸಮಿತಿ ಪದಾಧಿಕಾರಿಗಳು ಭಾಗಿಯಾಗಿದ್ದರು.

Click to comment

Leave a Reply

Your email address will not be published. Required fields are marked *

www.publictv.in