Connect with us

Crime

ಕಂಟೈನರ್ ಕೆಳಗೆ ನುಗ್ಗಿದ ಕಾರು ನುಜ್ಜುಗುಜ್ಜು- ಚಾಲಕ ಸಾವು

Published

on

– ನಾಲ್ವರಿಗೆ ಗಂಭೀರ ಗಾಯ

ಮಂಗಳೂರು: ರಸ್ತೆ ಬದಿ ನಿಂತಿದ್ದ ಕಂಟೈನ​ರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ.

ಚೇತನ್ (21) ಮೃತಪಟ್ಟ ಕಾರು ಚಾಲಕ. ಮಂಗಳೂರಿನ ಹೊರ ವಲಯದ ತೊಕ್ಕೊಟ್ಟು ಎಂಬಲ್ಲಿ ಮೆಹಂದಿ ಕಾರ್ಯಕ್ರಮ ಮುಗಿಸಿ ಕಾರಿನಲ್ಲಿ ಐದು ಮಂದಿ ಹಿಂದುರುತ್ತಿದ್ದರು. ಜಪ್ಪಿನಮೊಗರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಕಂಟೈನ​ರ್‌ಗೆ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಚೇತನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿ ಇದ್ದ ನಾಲ್ವರು ಗಾಯಗೊಂಡಿದ್ದಾರೆ.

ಗಾಯಗೊಂಡ ನಾಲ್ವರನ್ನು ಕೂಡಲೇ ಮಾರ್ಗದಲ್ಲಿ ಹೋಗುತ್ತಿದ್ದ ಜನರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ಕದ್ರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.