ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‍ನಲ್ಲಿ 200 ಕೋಟಿ ರೂ,ಗಳನ್ನು ಘೋಷಿಸಿರುವುದು ಸಂತಸ ತಂದಿದೆ ಎಂದು ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ರಾಜ್ಯಾಧ್ಯಕ್ಷ ಜೋಯ್ಲಸ್ ಡಿಸೋಜಾ ತಿಳಿಸಿದ್ದಾರೆ.
Advertisement
2011-12ರ ಬಜೆಟ್‍ನಲ್ಲಿ ಅಂದು ಮುಖ್ಯಮಂತ್ರಿ ಯಡಿಯೂರಪ್ಪರವರು ಕರ್ನಾಟಕದ ಇತಿಹಾಸದಲ್ಲಿಯೇ ಮೊತ್ತಮೊದಲ ಬಾರಿಗೆ ಕ್ರೈಸ್ತ ಸಮುದಾಯಕ್ಕಾಗಿ 50 ಕೋಟಿ ರೂಪಾಯಿಯನ್ನು ಮೀಸಲಿರಿಸಿದ್ದರು. ಇದೀಗ ಪ್ರಸ್ತುತ ವರ್ಷ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಮೀಸಲಿರಿಸಿರುವುದು ಕ್ರೈಸ್ತ ಸಮುದಾಯದ ಬಗ್ಗೆ ಯಡಿಯೂರಪ್ಪ ಅವರಿಗೆ ಇರುವ ಕಾಳಜಿಯ ಪ್ರತೀಕವಾಗಿದೆ.
Advertisement
ಇದಕ್ಕಾಗಿ ಕರ್ನಾಟಕದ ಕ್ರೈಸ್ತ ಸಮುದಾಯದ ಪರವಾಗಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು, ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಜೋಯ್ಲಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.