ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ (Mangaluru City Corporation council) ನೂತನ ಮೇಯರ್ (Mayor) ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ (Deputy Mayor) ಆಗಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.
Advertisement
ಸೆ.9ರ ಶುಕ್ರವಾರ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 23ನೇ ಅವಧಿಯ ಚುನಾವಣೆ (Election) ನಡೆಯಿತು. ಚುನಾವಣಾಧಿಕಾರಿಯಾಗಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಚುನಾವಣೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನೂತನ ಮೇಯರ್ ಹಾಗೂ ಉಪ ಮೇಯರ್‌ಗಳ ಹೆಸರನ್ನು ಘೋಷಿಸಿದರು. ಇದನ್ನೂ ಓದಿ: ಗೋಧಿ ಬಳಿಕ ಇದೀಗ ನುಚ್ಚಕ್ಕಿ ರಫ್ತನ್ನು ನಿಷೇಧಿಸಿದ ಕೇಂದ್ರ
Advertisement
Advertisement
ಶಾಸಕರು, ಮಹಾನಗರ ಪಾಲಿಕೆಯ ಕಾರ್ಪೊರೇಟರ್‌ಗಳು ಚುನಾವಣೆಯಲ್ಲಿ ಭಾಗವಹಿಸಿದ್ದರು. ಒಟ್ಟು 65 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ 62 ಸದಸ್ಯರು ಚುನಾವಣೆಗೆ ಹಾಜರಾಗಿದ್ದರು. ಜೆಪಿಯ ಮೇಯರ್ ಅಭ್ಯರ್ಥಿ ಹಾಗೂ ಬಿಜೆಪಿಯ ಉಪಮೇಯರ್ ಅಭ್ಯರ್ಥಿಗೆ ತಲಾ 46 ಮತ ಬಿದ್ದು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಇತರೆ ಚುನಾವಣಾ ಪ್ರಕ್ರಿಯೆ ಅಧಿಕಾರಿಗಳು ಭಾಗವಹಿಸಿದ್ದರು. ಇದನ್ನೂ ಓದಿ: ಕೋವಿಡ್‌ನಿಂದ ಮೃತಪಟ್ಟವರ ಸಮಾಧಿಗಳ ಮೇಲೆ ಬಿಜೆಪಿ ಸರ್ಕಾರದಿಂದ ಭ್ರಷ್ಟೋತ್ಸವ – ಕಾಂಗ್ರೆಸ್ ಕಿಡಿ