– ಸಿಎಎ, ಗೋಲಿಬಾರ್ ವಿರೋಧಿಸಿ ಸಮಾನ ಮನಸ್ಕ ಸಂಘಟನೆಗಳ ಪ್ರತಿಭಟನಾ ಸಭೆ
ಮಂಗಳೂರು: ಪೌರತ್ವ ತಿದ್ದುಪಡೆ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ವಿರೋಧಿಸಿ ಮಂಗಳೂರಿನಲ್ಲಿ ಗುರುವಾರ ಸಮಾನ ಮನಸ್ಕರು ನಗರದ ಪುರಭವನದ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಎದುರು ಪ್ರತಿಭಟನಾ ಸಭೆ ನಡೆಸಿದರು.
ಕಾಂಗ್ರೆಸ್, ಜೆಡಿಎಸ್, ಸಿಪಿಐಎಂ ಸೇರಿದಂತೆ ವಿವಿಧ ಸಮಾನ ಮನಸ್ಕ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಯ ನೇತೃತ್ವದಲ್ಲಿ ನಡೆದ ಈ ಪ್ರತಿಭಟನಾ ಸಭೆಯಲ್ಲಿ ನೂರಾರು ಜನ ಭಾಗವಹಿಸಿದ್ದರು. ಮಂಗಳೂರಿನಲ್ಲಿ ಹಿಂಸಾಚಾರ, ಗೋಲಿಬಾರ್, ಕರ್ಫ್ಯೂ ನಡೆದ ಬಳಿಕ ಇದೇ ಮೊದಲ ಬಾರಿಗೆ ವಿವಿಧ ಸಂಘಟನೆಗಳ ಧರಣಿ ನಡೆಸಲಾಯಿತು. ಇದನ್ನೂ ಓದಿ: ಸಿಎಎ ವಿರೋಧಿಸಿ ಮಂಗ್ಳೂರಿನಲ್ಲಿ ಜ.4ರಂದು ನಿಗದಿಯಾಗಿದ್ದ ಪ್ರತಿಭಟನೆ ರದ್ದು
Advertisement
Advertisement
ಮಾಜಿ ಸಚಿವ ರಮಾನಾಥ ರೈ, ಅಭಯಚಂದ್ರ ಜೈನ್, ಐವನ್ ಡಿಸೋಜ ಸೇರಿ ಕಾಂಗ್ರೆಸ್ ನಾಯಕರು, ಜೆಡಿಎಸ್, ಸಿಪಿಐಎಂ ನಾಯಕರು ಭಾಗಿಯಾದ ಈ ಧರಣಿ ಗುರುವಾರ ಬೆಳಗ್ಗೆಯಿಂದ ಸಂಜೆಯವರೆಗೂ ನಡೆದಿಯಿತು. ಈ ಸಭೆಯನ್ನು ಉದ್ದೇಶಿಸಿ ಅನೇಕ ಮುಖಂಡರು ಮಾತನಾಡಿದರು. ಡಿಸೆಂಬರ್ 19ರಂದು ನಡೆದ ಪ್ರತಿಭಟನೆ, ಹಿಂಸಾಚಾರದಲ್ಲಿ ಅಮಾಯಕರ ಬಂಧನವಾಗಿದೆ. ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕು. ಅಷ್ಟೇ ಅಲ್ಲದೆ ಗೋಲಿಬಾರ್ ನಲ್ಲಿ ಮೃತರಪಟ್ಟ ಇಬ್ಬರ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯಿಸಲಾಯಿತು. ಜೊತೆಗೆ ಮ್ಯಾಜಿಸ್ಟ್ರೇಟ್ ತನಿಖೆ ಬೇಡ, ನ್ಯಾಯಾಂಗ ತನಿಖೆಯೇ ನಡೆಯಬೇಕು ಧರಣಿ ನಿರತ ಸಂಘಟನೆಗಳ ಮುಖಂಡರಿಂದ ಹಕ್ಕೊತ್ತಾಯ ನಡೆಯಿತು.