ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಸ್ಫೋಟ (Cooker Bomb Blast) ಪ್ರಕರಣ ರಾಜ್ಯವನ್ನೇ ತಲ್ಲಣಗೊಳಿಸಿದೆ. ಘಟನೆಯ ಹಿಂದೆ ಭಯೋತ್ಪಾದನೆಯ (Terrorism) ದೊಡ್ಡ ಪಿತೂರಿಯಿರುವುದು ತಿಳಿದುಬರುತ್ತಲೇ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಲು ಒತ್ತಾಯಿಸಲಾಗಿತ್ತು. ಇದೀಗ ಪ್ರಕರಣದ ತನಿಖೆಗೆ ಎನ್‌ಐಎಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ.
ಇಂದು ಎನ್‌ಐಎ ಅಧಿಕಾರಿಗಳು ಮಂಗಳೂರು (Mangaluru) ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ್ದು, ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರು ಕುಕ್ಕರ್ ಸ್ಫೋಟ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿದ್ದಾರೆ. ಎನ್‌ಐಎ ಇಂದಿನಿಂದಲೇ ಪ್ರಕರಣದ ಬಗ್ಗೆ ತನಿಖೆಯನ್ನು ನಡೆಸಲಿದೆ.
ಕುಕ್ಕರ್ ಬಾಂಬ್ ಅನ್ನು ಸ್ಫೋಟಿಸಿರುವ ಶಾರೀಕ್ (Shariq) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಶಾರೀಕ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಶಾರೀಕ್ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನೆಲೆ ಮಂಗಳೂರು ಪೊಲೀಸರು ಈಗಾಗಲೇ ವಿಚಾರಣೆಯನ್ನು ನಡೆಸಿದ್ದಾರೆ. ಇದನ್ನೂ ಓದಿ: ಶಾಲೆಗೆ ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿ – ನೋ ಎಂಟ್ರಿ ಎಂದ ಶಿಕ್ಷಕರು
ಪೊಲೀಸರು ಈಗಾಗಲೇ ಶಂಕಿತ ಉಗ್ರ ಶಾರೀಕ್ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಖುದ್ದು ಪೊಲೀಸ್ ಕಮಿಷನರ್ ನೇತೃತ್ವದಲ್ಲೇ ತನಿಖಾ ತಂಡ ಶಾರೀಕ್ ಹೇಳಿಕೆಯನ್ನು ವೀಡಿಯೋ ರೆಕಾರ್ಡ್ ಮಾಡಿಕೊಂಡಿದೆ. ಶಾರೀಕ್‌ಗೆ 100ಕ್ಕೂ ಅಧಿಕ ಪ್ರಶ್ನೆಗಳನ್ನು ಕೇಳಲಾಗಿದೆ. ಇಂದಿನಿಂದ ಪ್ರತ್ಯೇಕವಾಗಿ ಎನ್‌ಐಎ ಅಧಿಕಾರಿಗಳು ಶಾರೀಕ್‌ನ ಹೇಳಿಕೆಯನ್ನು ಪಡೆಯಲಿದ್ದಾರೆ. ಇದನ್ನೂ ಓದಿ: ಗಾಳಿಯಲ್ಲಿ ಗುಂಡುಹಾರಿಸಿ ಹಿಡಿಯಲು ಮುಂದಾದ ಅರಣ್ಯಾಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಗಂಧಚೋರರು