ಬೆಂಗಳೂರು: ಟ್ರಬಲ್ ಶೂಟರ್, ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ (DK Shivakumar) ಅವರಿಗೇ ಈಗ ಟ್ರಬಲ್ ಶುರುವಾಗಿದೆ. ಕುಕ್ಕರ್ ಬ್ಲಾಸ್ಟ್ (Cooker Bomb Blast) ವಿವಾದದಲ್ಲಿ ಏಕಾಂಗಿಯಾಗಿದ್ದಾರೆ ಅನ್ನೋ ಮಾತುಗಳು ಪಕ್ಷದಲ್ಲಿ ಕೇಳಿಬರುತ್ತಿವೆ.
ವಿವಾದ ಆದ ಕೂಡಲೇ ಡಿಕೆಶಿ ಪರ ಬ್ಯಾಟಿಂಗ್ ಮಾಡಬೇಕಿದ್ದ ಕಾಂಗ್ರೆಸ್ ನಾಯಕರು (Congress Leader) ಸೈಲೆಂಟ್ ಆಗಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್‌ನಲ್ಲೂ ಉತ್ತರಿಸಿಲ್ಲ. ಜಮೀರ್ ಅಹಮದ್ ಖಾನ್ ನೋ ಕಾಮೆಂಟ್ಸ್ ಎಂದು ಸೈಲೆಂಟ್ ಆಗಿದ್ದಾರೆ. ಡಿಕೆಶಿ ಬಣದ ಸ್ನೇಹಿತರಂತೂ ಏನೂ ಮಾತನಾಡದೇ ಸುಮ್ಮನಿದ್ದಾರೆ. ಇದನ್ನೂ ಓದಿ: ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ
Advertisement
Advertisement
ಡಿಕೆಶಿ ಏಕಾಂಗಿ ಆಗಿದ್ದೇಕೆ?
ಚುನಾವಣೆ (Election) ಹತ್ತಿರ ಇರೋದ್ರಿಂದ ಉಗ್ರ ಶಾರಿಕ್ ವಿಚಾರದಲ್ಲಿ ಡಿಕೆಶಿ ಪರ ಮಾತನಾಡಿದ್ರೆ ನಮಗೆ ಡ್ಯಾಮೇಜ್ ಆಗುತ್ತೆ ಎಂಬ ಆತಂಕ ಶುರುವಾಗಿದೆ. ಅಲ್ಪಸಂಖ್ಯಾತ ಪರ ಇದ್ದಾರೆ ಎಂಬ ಹಣೆಪಟ್ಟಿ ಸಿಗಬಹುದು ಎಂಬ ಭಯ ಕಾಡುತ್ತಿದೆ. ಆದ್ರೆ ಸಿದ್ದರಾಮಯ್ಯ ಬಣಕ್ಕೆ ಡಿಕೆಶಿ ಇಕ್ಕಟ್ಟಿಗೆ ಸಿಲುಕೋದು ಕೊಂಚ ಸಮಾಧಾನವೇ ತರಿಸಿದೆ. ಹೀಗಾಗಿ ಅವರ ವಿವಾದ ಅವರಿಗೆ ಇರಲಿ ಅಂತ ಸುಮ್ಮನಾಗಿದೆ.
Advertisement
Advertisement
ಡಿಕೆಶಿ ಪರ ಮಾತಾಡಿದ್ರೆ ಕ್ಷೇತ್ರದಲ್ಲಿ ನಮಗೂ ಡ್ಯಾಮೇಜ್ ಆಗಬಹುದು ಎಂಬ ಆತಂಕವಾಗಿದೆ. ಡಿಕೆಶಿ ಹೇಳಿಕೆ ರಾಷ್ಟ್ರಮಟ್ಟದ ವಿವಾದವಾಗಿದ್ದರಿಂದ ಆ ವಿಷಯದಲ್ಲಿ ತಲೆ ಹಾಕೋದು ಬೇಡವೆಂದು ನಾಯಕರು ತಟಸ್ಥತೆ ಕಾಯ್ದುಕೊಂಡಿರುವುದಾಗಿ ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ: ಡಿಕೆಶಿ ಪ್ರಶ್ನೆ
ಡಿಕೆಶಿ ಹೇಳಿದ್ದೇನು?
ನಿನ್ನೆ ಪತ್ರಕರ್ತರ ಭವನದಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟ (Cooker Bomb Blast) ಪ್ರಕರಣದ ಆರೋಪಿ ಶಾರೀಕ್‌ನನ್ನು ಟೆರರಿಸ್ಟ್ ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ? ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ (Mumbai Attack) ಅಥವಾ ಪುಲ್ವಾಮಾ (Polwama), ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಅಂದುಕೊಂಡು ವೋಟರ್ ಐಡಿ ಹಗರಣವನ್ನು (Voter Id Scam) ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು ಉಗ್ರ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು (ADGP) ಅಷ್ಟು ಸ್ಪೀಡ್ ಆಗಿ ಹೇಗೆ ಹೇಳಿದರು ಎಂದು ಪ್ರಶ್ನಿಸಿದ್ದರು.
ಬೆಂಗಳೂರಿನ ವೋಟರ್ ಐಡಿ ಹಗರಣ (Voter ID Scam) ವಿಷಯವನ್ನು ಬಿಜೆಪಿ ಡೈವರ್ಟ್ ಮಾಡಿದೆ. ಶಿವಮೊಗ್ಗಕ್ಕೆ, ಮಂಗಳೂರು, ಮಲೆನಾಡು ಭಾಗಕ್ಕೆ ಯಾಕೆ ತನಿಖೆ ಹೋಗಲ್ಲ. ಎಲ್ಲಾ ಬೆಂಗಳೂರಿನಲ್ಲೇ ತನಿಖೆ ಆಗುತ್ತಿದೆ. ಜನರು ದಡ್ಡರಾ? ಜನರ ಭಾವನೆಗಳ ಮೇಲೆ ಆಟ ಆಡುತ್ತಿದೆ. ಬಿಜೆಪಿ ಸರ್ಕಾರದ ಕೊನೆ ದಿನಗಳು ಬಂದಿದೆ ಇನ್ನೇನು 100 ದಿನ ಇದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ ಮಾಡುತ್ತೀರಿ. ಶಿವಮೊಗ್ಗ, ಮಂಗಳೂರು, ಉಡುಪಿ ಕಡೆ ಯಾಕೆ ಯಾರೂ ಬಂಡವಾಳ ಹೂಡಿಕೆ ಮಾಡುತ್ತಿಲ್ಲ. ಶಿವಮೊಗ್ಗದಲ್ಲಿ ಕಮಲದ ರೂಪದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗುತ್ತಿದೆ. ಯಾಕೆ ಆ ಭಾಗದಲ್ಲಿ ಹೂಡಿಕೆ ಆಗುತ್ತಿಲ್ಲ. ಯಾರು ಎಲ್ಲಿ ಹೂಡಿಕೆ ಮಾಡಿದ್ದಾರೆ? ಪಟ್ಟಿಯನ್ನು ಬಿಡುಗಡೆ ಮಾಡಲಿ ಎಂದು ಡಿಕೆಶಿ ಸರ್ಕಾರಕ್ಕೆ ಸವಾಲು ಎಸೆದರು.