ಮಂಗಳೂರು: ಇಲ್ಲಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ (Kudroli Gokarnanath Temple) ಕಳೆದ 9 ದಿನಗಳಿಂದ ಅದ್ದೂರಿಯಾಗಿ ನಡೆದ ನವರಾತ್ರಿ ಮಹೋತ್ಸವಕ್ಕೆ ದಸರಾ ಮೆರವಣಿಗೆಯೊಂದಿಗೆ ತೆರೆ ಬಿದ್ದಿತು.
Advertisement
ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಕುದ್ರೋಳಿ ಕ್ಷೇತ್ರದಿಂದ ಹೊರಟ ಬೃಹತ್ ದಸರಾ ಮೆರವಣಿಗೆಯಲ್ಲಿ ವಿಘ್ನನಿವಾರಕ ಗಣೇಶ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯರ ಮೂರ್ತಿಗಳನ್ನು ಸ್ತಬ್ಧಚಿತ್ರದೊಂದಿಗೆ (Tableau) ಕೊಂಡೊಯ್ಯಲಾಯಿತು. ಬೃಹತ್ ದಸರಾ ಮೆರವಣಿಗೆ ಕೇಂದ್ರದ ಮಾಜಿ ಸಚಿವ ದಸರಾ ಮಹೋತ್ಸವದ ರೂವಾರಿ ಬಿ.ಜನಾರ್ದನ ಪೂಜಾರಿ (Janardhan Poojary) ನೇತೃತ್ವದಲ್ಲಿ ನಡೆಯಿತು. ಸರ್ಕಾರದ ಯಾವುದೇ ಅನುದಾನವಿಲ್ಲದೆ ಇಷ್ಟು ಅಚ್ಚುಕಟ್ಟಾಗಿ ನಡೆಯುವ ಈ ದಸರಾವನ್ನು ಎಲ್ಲರು ಕೊಂಡಾಡಿದರು.
Advertisement
Advertisement
ಸುಮಾರು ಒಂದು ಸಾವಿರ ಆಕರ್ಷಕ ಕೇರಳ (Kerala) ಕೊಡೆಗಳು, ನೂರಕ್ಕೂ ಅಧಿಕ ಬ್ಯಾಂಡ್ ಸೆಟ್‍ಗಳು, ಸುಮಾರು 40 ಜಾನಪದ ಕುಣಿತಗಳ ತಂಡ, ಕೇರಳ ಚೆಂಡೆವಾದನ, ಕೊಂಬು ಕಹಳೆ ದೇಶದ ಇತಿಹಾಸವನ್ನು ಬಿಂಬಿಸುವ ಸುಮಾರು 60 ಕ್ಕೂ ಅಧಿಕ ಸ್ತಬ್ಧಚಿತ್ರಗಳು ಈ ದಸರಾ ಮೆರವಣಿಗೆಗೆ ಮೆರುಗು ನೀಡಿತು. ದಾರಿಯುದ್ದಕ್ಕೂ ಆಕರ್ಷಕ ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು. ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದರು. ಇದೊಂದು ಜಗತ್ ಪ್ರಸಿದ್ಧ ದಸರಾ ಮೆರವಣಿಗೆ ಎಂದು ನೋಡಿದ ಜನ ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಬನ್ನಿಮಂಟಪದಲ್ಲಿ ದಸರಾಗೆ ವರ್ಣರಂಜಿತ ತೆರೆ; See You In 2024
Advertisement
ಶ್ರೀ ಕ್ಷೇತ್ರದಿಂದ ಸಂಜೆ ಹೊರಟ ಮೆರವಣಿಗೆ ನಗರದ ಸುಮಾರು 7 ಕಿಲೋ ಮೀಟರ್ ಸಾಗಿದ್ದು, ಬುಧವಾರ ಮುಂಜಾನೆ ಮತ್ತೆ ಶ್ರೀ ಕ್ಷೇತ್ರಕ್ಕೆ ತಲುಪಲಿದೆ. ಕ್ಷೇತ್ರದ ಪುಷ್ಕರಣಿಯಲ್ಲಿ ಗಣೇಶ, ಆದಿಶಕ್ತಿ, ಶಾರದಾ ಮಾತೆ ಹಾಗೂ ನವದುರ್ಗೆಯರ ಮೂರ್ತಿಯನ್ನು ವಿಸರ್ಜಿಸಲಾಗಿದೆ. ಇದರೊಂದಿಗೆ ಈ ದಸರಾ ಮೆರವಣಿಗೆಗೆ ತೆರೆಬಿದ್ದಿದೆ. ಈ ದಸರಾ ಇನ್ನಷ್ಟು ಪ್ರಸಿದ್ಧಿ ಹೊಂದಲಿ ಅನ್ನೋದು ಭಕ್ತರ ಆಶಯ.
Web Stories