ಮಂಗಳೂರು: ನಗರದಲ್ಲಿ ವೈದ್ಯರ ಡ್ರಗ್ಸ್ ಜಾಲ ಪ್ರಕರಣದಲ್ಲಿ (Drug Peddling) ಸಿಕ್ಕಿಬಿದ್ದ ಇಬ್ಬರು ವೈದ್ಯರು (Doctors) ಹಾಗೂ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು (Medical Students) ಕೆಎಂಸಿ ಆಸ್ಪತ್ರೆಯ (KMC Hospital) ಆಡಳಿತ ಮಂಡಳಿ ಅಮಾನತು ಮಾಡಿದೆ.
Advertisement
ಅತ್ತಾವರ ಕೆಎಂಸಿ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ. ಸಮೀರ್, ಮೆಡಿಕಲ್ ಸರ್ಜನ್ ಡಾ. ಮಣಿಮಾರನ್ ಮುತ್ತು ಅಮಾನತಾಗಿರುವ ವೈದ್ಯರು. ಡಾ. ಕಿಶೋರಿಲಾಲ್, ಡಾ. ನದೀಯಾ ಸಿರಾಜ್, ಡಾ. ವರ್ಷಿಣಿ ಪತ್ರಿ, ಡಾ. ರಿಯಾ ಚಡ್ಡ, ಡಾ. ಇರಾ ಬಾಸಿನ, ಡಾ. ಕ್ಷಿತಿಜ್ ಗುಪ್ತಾ, ಡಾ. ಹರ್ಷ ಕುಮಾರ್ ವಿ.ಎಸ್. ಅಮಾನತು ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳು. ಇದನ್ನೂ ಓದಿ: ಸಿಐಡಿ ಅಧಿಕಾರಿಗಳನ್ನು ನೂಕಿ ಪಿಎಸ್‌ಐ ಹಗರಣದ ಕಿಂಗ್‌ಪಿನ್ ಪರಾರಿ
Advertisement
Advertisement
ಮಂಗಳೂರಿನಲ್ಲಿ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ದಂಧೆ ಹಾಗೂ ಗಾಂಜಾ ಸೇವನೆ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಕೆಎಂಸಿ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ. ಅದೇ ರೀತಿ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಆಸ್ಪತ್ರೆಯಿಂದ ಅಮಾನತು ಮಾಡಿದೆ. ಇದನ್ನೂ ಓದಿ: 15 ದಿನಗಳಿಂದ ಮಾಗಡಿ ತಹಶೀಲ್ದಾರ್ ನಾಪತ್ತೆ
Advertisement
ಮಂಗಳೂರು ಕಮಿಷನರ್ ಕಚೇರಿಗೆ ಆಗಮಿಸಿರುವ ಕೆಎಂಸಿ ಡೀನ್ ಉನ್ನಿಕೃಷ್ಣನ್ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡ ಬಗ್ಗೆ ಪೊಲೀಸ್ ಕಮಿಷನರ್‌ಗೆ ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k