ಮಂಗಳೂರು: ಶಿಕ್ಷಣ ಕಾಶಿ ಮಂಗಳೂರಿನಲ್ಲಿ (Mangaluru) ವೈದ್ಯರ ಗಾಂಜಾ ಘಾಟಿನ ನಶೆ (Drug Peddling) ಇನ್ನೂ ಇಳಿಯುವ ಲಕ್ಷಣ ಕಾಣುತ್ತಿಲ್ಲ. ಪೊಲೀಸರು ಕೆದಕಿದಷ್ಟು ಹೆಚ್ಚು ಮಂದಿ ಈ ಪ್ರಕರಣದಲ್ಲಿ ಬಲೆಗೆ ಬೀಳುತ್ತಿದ್ದಾರೆ. ವೈದ್ಯರ ಗಾಂಜಾ ಘಾಟಿನ ಹಿಂದೆ ಬಿದ್ದ ಪೊಲೀಸರು ಇದೀಗ ಮತ್ತೆ 9 ಮಂದಿಯನ್ನು ಬಂಧಿಸಿದ್ದಾರೆ.
ಡಾ. ಸಿದ್ದಾರ್ಥ್ ಪಾವಸ್ಕರ್, ಡಾ. ಸೂರ್ಯಜಿತ್ ದೇವ್, ಡಾ. ಪ್ರಣಯ್ ನಟರಾಜ್, ಡಾ. ಚೈತನ್ಯ ತುಮುಲುರಿ, ಡಾ. ಸುಧೀಂದ್ರ, ಡಾ. ಇಶ್ ಮಿಡ್ಡಾ, ಡಾ. ವಿದುಷ್ ಕುಮಾರ್, ಡಾ. ಶರಣ್ಯಾ, ಡಾ. ಆಯಿಷಾ ಮಹಮ್ಮದ್ ಬಂಧಿತ ಆರೋಪಿಗಳು. ಇವರೆಲ್ಲರೂ ಕೆಎಂಸಿ ವೈದ್ಯಕೀಯ ಕಾಲೇಜು, ಶ್ರೀನಿವಾಸ್ ಆಸ್ಪತ್ರೆ, ದುರ್ಗಾ ಸಂಜೀವಿನಿ ಸಂಸ್ಥೆಯಲ್ಲಿ ವೈದ್ಯಕೀಯ ಪದವಿ ಪಡೆಯುತ್ತಿದ್ದಾರೆ. ಡಾ. ಶರಣ್ಯಾ ಬಿಡಿಎಸ್ ವಿದ್ಯಾರ್ಥಿನಿಯಾಗಿದ್ದರೆ, ಉಳಿದವರು ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ- NIA ಚಾರ್ಜ್‍ಶೀಟ್‍ನಲ್ಲಿ ಸ್ಫೋಟಕ ಮಾಹಿತಿ ಬಯಲು
Advertisement
Advertisement
ಬಂಧಿತರಲ್ಲಿ ಇಬ್ಬರು ವೈದ್ಯರು (Doctors), 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ (Medical Students). ಈ ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಡಾ. ಕಿಶೋರಿಲಾಲ್ ರಾಮ್ ಜೀಯೊಂದಿಗೆ ಸಂಪರ್ಕ ಹೊಂದಿದ್ದ ಗಾಂಜಾ ಪೆಡ್ಲರ್‌ಗಳು ಕೆಲವರು ಫೋನ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದಾರೆ.
Advertisement
ಪ್ರಕರಣದ ಬಗ್ಗೆ ಮಂಗಳೂರು ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಬಂಧಿತರಲ್ಲಿ ಎಲ್ಲರಿಗೂ ಪಾಸಿಟಿವ್ ಬಂದಿದೆ. ಬಂಧಿತರಿಂದಲೇ ಮಾಹಿತಿ ಕಲೆಹಾಕಿ ಪೊಲೀಸರು ಪ್ರಕರಣದ ಇನ್ನುಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಹಿಟ್ ಆಂಡ್ ರನ್ ಕೇಸ್‌ಗೆ ಟ್ವಿಸ್ಟ್ – ಸಾರ್ವಜನಿಕರು, ಸಿಸಿಟಿವಿ ದೃಶ್ಯಗಳಿಂದ ನಿಜ ಬಯಲಿಗೆ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k