ಮಂಗಳೂರು: ಚಲಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ನಿಂದ ಭಾರೀ ಪ್ರಮಾಣ ಅನಿಲ ಸೋರಿಕೆಯಾಗಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅನಿಲ ಸೋರಿಕೆಯಾಗಿದೆ.
ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಕರವೇಲು ಬಳಿ ಗ್ಯಾಸ್ ಸಿಲಿಂಡರ್ ನ ಕ್ಯಾಪ್ ಏಕಾಏಕಿ ಓಪನ್ ಆಗಿದ್ದರಿಂದ ಅನಿಲ ಸೋರಿಕೆಯಾಗಿದ್ದು, ಮುನ್ನೆಚ್ಚರಿಕ ಕ್ರಮವಾಗಿ ಅಧಿಕಾರಿಗಳು ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ.
Advertisement
Advertisement
ಸ್ಥಳಕ್ಕೆ ಎಂಆರ್‌ಪಿಎಲ್ (Mangalore Refinery and Petrochemicals Limited) ತಜ್ಞರು ಆಗಮಿಸಿ ಅನಿಲ ಸೋರಿಕೆ ತಡೆದಿದ್ದಾರೆ. ಗ್ಯಾಸ್ ಟ್ಯಾಂಕರ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿತ್ತು. ಅನಿಲ ಹೇಗೆ ಸೋರಿಕೆ ಆಗಿದೆ ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಚಾಲಕನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.