– ದಸರಾಕ್ಕೆ ಚಾಲನೆ ನೀಡಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ
ಮಂಗಳೂರು: ಇಲ್ಲಿನ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ (Kudroli Shri Gokarnanatheshwara Kshetra) ನಡೆಯುವ ಮಂಗಳೂರು ದಸರಾಕ್ಕೆ ಗುರುವಾರ ಚಾಲನೆ ದೊರೆಯಿತು. ನವರಾತ್ರಿಯ ಒಂಬತ್ತು ದಿನಗಳ ಕಾಲ ಈ ಕ್ಷೇತ್ರದಲ್ಲಿ ಆರಾಧನೆಗೊಳ್ಳಲಿರುವ ನವದುರ್ಗೆಯರ ಮೂರ್ತಿ (Navadurga Idol) ಪ್ರತಿಷ್ಠಾನೆ ನಡೆಯಿತು. ಈ ಬಾರಿಯ ದಸರಾಕ್ಕೆ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಚಾಲನೆ ನೀಡಿದರು.
Advertisement
ಮಂಗಳೂರು ದಸರಾ ಮಹೋತ್ಸವವನ್ನು ಆಯೋಜಿಸುತ್ತಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಇಂದಿನಿಂದ ಒಂಬತ್ತು ದಿನಗಳ ಕಾಲ ನಡೆಯಲಿರುವ ನವರಾತ್ರಿ ಮಹೋತ್ಸವ ‘ಮಂಗಳೂರು ದಸರಾ’ಕ್ಕಿಂದು (Mangaluru Dasara) ವಿದ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದಲ್ಲಿ ವಿಘ್ನವಿನಾಶಕ ಗಣೇಶ, ವಿದ್ಯಾದೇವಿ ಶಾರದಾ ಮಾತೆ, ಆದಿಶಕ್ತಿ ಹಾಗೂ ನವದುರ್ಗೆಯರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಇದನ್ನೂ ಓದಿ: ಈ ಮೈಸೂರು ದಸರಾದ ಗಜಪಡೆ – ಅಭಿಮನ್ಯು & ಟೀಂ ಬಗ್ಗೆ ಇಲ್ಲಿದೆ ಫುಲ್ ಡಿಟೇಲ್ಸ್
Advertisement
Advertisement
ಎಲ್ಲಾ ದೇವರನ್ನು ಏಕಕಾಲಕ್ಕೆ ಪ್ರತಿಷ್ಠಾಪಿಸಲಾಗಿದ್ದು, 9 ದಿನಗಳ ಕಾಲ ಪೂಜಾ ಕೈಂಕರ್ಯ ನೆರವೇರಲಿದೆ. ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಈ ಬಾರಿಯ ಮಂಗಳೂರು ದಸರಾಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಇದನ್ನೂ ಓದಿ: ಶಿವಮೊಗ್ಗ ದಸರಾಗೆ ವೈಭವದ ಚಾಲನೆ
Advertisement
ಈ ಸುಂದರ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಂಡ ನವದುರ್ಗೆಯರು ದೇಶ ವಿದೇಶದ ಭಕ್ತರನ್ನು ಸೆಳೆಯುತ್ತದೆ. ಗಣಪತಿ, ಶಾರದಾ ಮಾತೆ, ಆದಿಶಕ್ತಿಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸಿದ್ದಿದಾತ್ರಿ, ಮಹಾಕಾಳಿ, ಕಾತ್ಯಾಯಿನಿ, ಸ್ಕಂದಮಾತೆ, ಮಹಾಗೌರಿಯರನ್ನ ಇಲ್ಲಿನ ಸುಂದರ ಕಲಾಕೃತಿಗಳ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿದೆ. ಭೂಲೋಕದ ಸ್ವರ್ಗದಂತಿರುವ ಸಭಾಂಗಣದಲ್ಲಿ ಅತ್ಯಾಕರ್ಷ ಸಂಯೋಜನೆಯಲ್ಲಿ ಈ 12 ದೇವರುಗಳನ್ನು ನೋಡುವುದು ಭಕ್ತರ ಕಣ್ಣಿಗೊಂದು ಹಬ್ಬವೇ ಸರಿ. ಇದನ್ನೂ ಓದಿ: ವಿಜಯನಗರ ಸಾಮ್ರಾಜ್ಯದಿಂದ ಮೈಸೂರಿಗೆ ದಸರಾ ಸಾಗಿಬಂದ ಹಾದಿ – ನಾಡಹಬ್ಬ ಸಂಸ್ಕೃತಿ ನಿಮಗೆಷ್ಟು ಗೊತ್ತು?
ಮೈಸೂರು ದಸರಾಕ್ಕೆ ಇದು ಸರಿಸಾಟಿ ಎಂದು ಭಕ್ತರು ಬಣ್ಣಿಸುತ್ತಾರೆ. ಈ ರೀತಿ ನವರಾತ್ರಿಯ ಸಂದರ್ಭ ದೇವರ ಪ್ರತಿಷ್ಠಾಪನೆ ದೇಶದ ಬೇರೆಲ್ಲೂ ಆಗೋದಿಲ್ಲ ಅನ್ನುವುದು ಇಲ್ಲಿನ ವಿಶೇಷತೆ. ಇದನ್ನೂ ಓದಿ: ದಿನೇಶ್ ಗುಂಡೂರಾವ್ ಗೋಹತ್ಯೆಗೆ ಬೆಂಬಲ ನೀಡುತ್ತಿದ್ದಾರೋ, ಗೋಮಾಂಸ ತಿನ್ನೋದನ್ನ ಸಮರ್ಥನೆ ಮಾಡ್ತಿದ್ದಾರೋ?- ಸಿ.ಟಿ.ರವಿ
ಕ್ಷೇತ್ರದಲ್ಲಿ ಒಂಬತ್ತು ದಿನಗಳ ಕಾಲ ಪೂಜೆಗೊಳ್ಳುವ ಈ ಎಲ್ಲಾ ಮೂರ್ತಿಗಳನ್ನು ಅಕ್ಟೋಬರ್ 13 ರಂದು ದೇವಸ್ಥಾನದಲ್ಲೇ ವಿಸರ್ಜನಾ ಪೂಜೆ ನಡೆಸಿ ಕ್ಷೇತ್ರಕ್ಕೆ ಪ್ರದಕ್ಷಿಣೆ ಹಾಕಿ, ಬಳಿಕ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಗುವುದು. ಸಂಭ್ರಮದ ಮಂಗಳೂರು ದಸರಾಕ್ಕೆ ನೀವೂ ಬನ್ನಿ.