Dakshina KannadaDistrictsKarnatakaLatestMain Post

ಸೂಲಿಬೆಲೆ ವಿರುದ್ಧ ಭಾಷಣ- ರಮಾನಾಥ್ ರೈಗೆ ಕೋರ್ಟ್ ಸಮನ್ಸ್

ಮಂಗಳೂರು: ಚಕ್ರವರ್ತಿ ಸೂಲಿಬೆಲೆ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮಾನಾಥ್ ರೈಗೆ ಕೋರ್ಟ್ ಸಮನ್ಸ್ ನೀಡಿದೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಸೈಗೋಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ರಮಾನಾಥ ರೈ, ಸೂಲಿಬೆಲೆಯವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ, ಬಿಜೆಪಿ ಮುಖಂಡ ರಹೀಂ ಉಚ್ಚಿಲ್ ಅವರು ರೈ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಮಂಗಳೂರು ಜೆಎಂಎಫ್ ಸಿ ಕೋರ್ಟ್ ಮೆಟ್ಟಿಲೇರಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ರಮಾನಾಥ್ ರೈ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದೆ. ಅಲ್ಲದೆ ಕೋರ್ಟಿಗೆ ಹಾಜರಾಗುವಂತೆ ರಮನಾಥ ರೈ ಅವರಿಗೆ ಜೆಎಂಎಫ್ ಸಿ ಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ರೈ ವಿರುದ್ಧ ಕೊಣಾಜೆ ಪೊಲೀಸರು ಐಪಿಸಿ ಸೆಕ್ಷನ್ 500 (ಮಾನಹಾನಿ) ಮತ್ತು 504ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Leave a Reply

Your email address will not be published.

Back to top button