ಮಂಗಳೂರು: ಕಬಡ್ಡಿ (Kabaddi) ಆಟಗಾರನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟುನಲ್ಲಿ ನಡೆದಿದೆ.
ಪುದುವೆಟ್ಟು ನಿವಾಸಿ ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಸ್ವರಾಜ್ ಕಬಡ್ಡಿ ಕ್ರೀಡೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದ. ಇದನ್ನೂ ಓದಿ: 7,000 ರಾಖಿ ಕಟ್ಟಿಸಿಕೊಂಡು ವಿಶ್ವ ದಾಖಲೆ ಬರೆದ ಜನಪ್ರಿಯ ಆನ್‌ಲೈನ್ ಬೋಧಕ ಖಾನ್ ಸರ್
ಗುರುವಾರ (ಇಂದು) ತನ್ನ ಮನೆಯ ಸ್ನಾನದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ (Dharmastala Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೇಶದಲ್ಲಿ ಲ್ಯಾಪ್‌ಟಾಪ್ ತಯಾರಿಸಲು 32 ಕಂಪನಿಗಳಿಂದ ಅರ್ಜಿ – 75 ಸಾವಿರ ಉದ್ಯೋಗ ಸೃಷ್ಟಿ
Web Stories