ಮಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ಬಡವರು, ನಿರ್ಗತಿಕರಿಗೆ ರಾಜ್ಯದ ಪ್ರಮುಖ ಪುಣ್ಯ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಿತ್ಯವೂ ಹಸಿವು ನೀಗಿಸುವ ಮಹತ್ವ ಕಾರ್ಯ ನಡೆಯುತ್ತಿದೆ.
ಕುದ್ರೋಳಿ ಕ್ಷೇತ್ರದ ಹರಿಕಾರ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಸಲಹೆ ಹಾಗೂ ಮಾರ್ಗದರ್ಶನದಂತೆ ಅಕ್ಕಿ ವಿತರಣೆ ಕಾರ್ಯ ಆರಂಭಗೊಂಡಿದೆ. ಆರಂಭದಲ್ಲಿ 100 ಕ್ವಿಂಟಾಲ್ ಅಕ್ಕಿ ವಿತರಣೆ ಮಾಡುವ ಉದ್ದೇಶ ಹೊಂದಿತ್ತಾದರೂ ನಂತರ ಅದು ವಿಸ್ತರಣೆಗೊಂಡು ಇದುವರೆಗೆ ಒಟ್ಟ 250 ಕ್ವಿಂಟಾಲ್ ಅಕ್ಕಿ ವಿತರಿಸಲಾಗಿದೆ. ಅಷ್ಟೇ ಅಲ್ಲದೆ ನಿತ್ಯವೂ ದೇವಸ್ಥಾನದ ವತಿಯಿಂದ 1,000 ಸಾವಿರ ಮಂದಿಗೆ ಅನ್ನದಾನ ನೀಡಲಾಗುತ್ತಿದೆ.
Advertisement
Advertisement
ಕುದ್ರೋಳಿ ಕ್ಷೇತ್ರದ ವತಿಯಿಂದ ನೀಡಲಾಗುತ್ತಿರುವ ನೆರವಿಗೆ ಭಕ್ತರು ಕೊಡುಗೈ ದಾನಿಗಳು ನೆರವು ನೀಡುತ್ತಿದ್ದಾರೆ. ದಿನದಿಂದ ದಿನಕ್ಕೆ ಕ್ಷೇತ್ರದ ವತಿಯಿಂದ ನೀಡಲಾಗುತ್ತಿರುವ ಅಕ್ಕಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಕಷ್ಟದಲ್ಲಿರುವ ಎಲ್ಲರಿಗೂ ಅಕ್ಕಿ ವಿತರಣೆ ನಡೆಯಲಿದೆ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ತಿಳಿಸಿದ್ದಾರೆ. ಮುಜರಾಯಿ ಇಲಾಖೆಗೆ ಸೇರದಿರುವ ಒಂದು ದೇವಸ್ಥಾನ ಈ ರೀತಿಯ ಪುಣ್ಯದ ಕೆಲಸ ಮಾಡುತ್ತಿರುವುದು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.