ಮಂಗಳೂರು: ಲಾಕ್‍ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಿಳಿದ 154 ವಾಹನಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಮಂಗಳೂರು ಕಮಿಷನರ್ ಡಾ.ಪಿ.ಎಸ್.ಹರ್ಷ, ದಕ್ಷಿಣ ಕನ್ನಡ ಜಿಲ್ಲಾದ್ಯಂತ ಲಾಕ್‍ಡೌನ್‍ನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಮಂಗಳೂರು ನಗರ ಕಮಿಷನರ್ ವ್ಯಾಪ್ತಿಯಲ್ಲಿ ಇಂದು ಕೊರೊನಾ ಲಾಕ್‍ಡೌನ್ ಆದೇಶ ಉಲ್ಲಂಘಿಸಿದ 154 ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
154 vehicles seized today for violations.. so far…
Comply with instructions and avoid inconvenience ..
Appeal everyone to help us fight COVID19..
TOGETHER WE CAN…
— Mangaluru City Police (@compolmlr) April 2, 2020
Advertisement
ಲಾಕ್ ಡೌನ್ ಹಿನ್ನಲೆಯಲ್ಲಿ ದ.ಕ. ಜಿಲ್ಲಾದ್ಯಂತ ದಿನಬಳಕೆ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಬೆಳಿಗ್ಗೆ 7ರಿಂದ 12ರವರೆಗೂ ಖರೀದಿಗಾಗಿ ವಾಹನಗಳಿಗೂ ಅವಕಾಶ ನೀಡಲಾಗಿತ್ತು. ಆದರೆ ಮಧ್ಯಾಹ್ನ 12 ಗಂಟೆಯ ಬಳಿಕವೂ ಕೆಲವು ವಾಹನ ಸವಾರರು ರಸ್ತೆಯಲ್ಲಿ ಸಂಚಾರ ನಡೆಸಿ ಕೊರೊನಾ ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡಿದ್ದರು. ಪೊಲೀಸ್ ಆಯುಕ್ತರು ಮೊದಲೇ ಎಚ್ಚರಿಕೆ ನೀಡಿದ್ದರೂ ಆದೇಶ ಧಿಕ್ಕರಿಸಿದ ರಸ್ತೆಗಿಳಿದ ವಾಹನಗಳನ್ನು ಕಮಿಷನರ್ ಆದೇಶದಂತೆ ಸೀಜ್ ಮಾಡಲಾಗಿದೆ.