– ಮಿಸ್ ದಿವಾ 2020 ಕಿರೀಟ ತನ್ನದಾಗಿಸಿಕೊಂಡ ಆಡ್ಲಿನ್ ಕ್ಯಾಸ್ಟೆಲಿನೋ
ಮಂಗಳೂರು: ಮಿಸ್ ದಿವಾ 2020 ಇದರ ಎಂಟನೇ ಆವೃತ್ತಿ ಮುಂಬೈನ ಅಂಧೇರಿಯಲ್ಲಿ ನಡೆದಿದ್ದು, ಮಂಗಳೂರು ಮೂಲದ ಆಡ್ಲಿನ್ ಕ್ಯಾಸ್ಟೆಲಿನೋ ಈ ಬಾರಿಯ ಮಿಸ್ ಯೂನಿವರ್ಸ್ 2020 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
20 ಮಂದಿ ಹೆಸರಾಂತ ಮಾಡೆಲ್‍ಗಳು ಪಾಲ್ಗೊಂಡಿದ್ದ ಕಣದಲ್ಲಿ ಕಳೆದ ಬಾರಿಯ ಚಾಂಪಿಯನ್ ವರ್ತಿಕಾ ಸಿಂಗ್ ವಿಜಯಿಯೆಂದು ಘೋಷಣೆಯಾದ ಬಳಿಕ ಆಡ್ಲಿನ್‍ಗೆ ಕಿರೀಟ ತೊಡಿಸಿದರು. ವರ್ತಿಕಾ ಸಿಂಗ್ 2019ರ ಸಾಲಿನ ಮಿಸ್ ಯೂನಿವರ್ಸ್ ಇಂಡಿಯಾ ಆಗಿ ಆಯ್ಕೆಯಾಗಿದ್ದರು.
Advertisement
Advertisement
ಫೆ.22ರಂದು ಮುಂಬೈನ ಯಶ್ ರಾಜ್ ಸ್ಟುಡಿಯೋದಲ್ಲಿ ನಡೆದ ಈ ಮಾಡೆಲಿಂಗ್ ಸ್ಪರ್ಧೆಯಲ್ಲಿ ಬಾಲಿವುಡ್ ನಟರಾದ ಅನಿಲ್ ಕಪೂರ್, ಆದಿತ್ಯ ರಾಯ್ ಕಪೂರ್, ಮಿಸ್ ಯೂನಿವರ್ಸ್ 2000 ಲಾರಾ ದತ್ತಾ, ಡಿಸೈನರ್ ಗಳಾದ ಶಿವನ್ ಮತ್ತು ನರೇಶ್, ಮಿಸ್ ಸುಪ್ರಾ ನ್ಯಾಶನಲ್ 2014 ಆಶಾ ಭಟ್, ಮಿಸ್ ಯೂನಿವರ್ಸ್ ಶ್ರೀಲಂಕಾ 2006 ಜಾಕ್ವೇಲಿನ್ ಫೆರ್ನಾಂಡಿಸ್, ಡಿಸೈನರ್ ನಿಕಿಲ್ ಮೆಹ್ರಾ, ಗ್ಯಾವಿನ್ ಮಿಗೆಲ್ ತೀರ್ಪುಗಾರರ ತಂಡದಲ್ಲಿದ್ದರು.
Advertisement
Advertisement
ನಟಿ ಮಲೈಕಾ ಅರೋರಾ ಫೈನಲ್ ಸ್ಪರ್ಧೆಯಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದರು. ಆವಿತ್ರಿ ಚೌಧರಿ ಮಿಸ್ ದಿವಾ 2020 ಆಗಿ ಆಯ್ಕೆಯಾಗಿದ್ದು, ಮಿಸ್ ಸುಪ್ರನ್ಯಾಷನಲ್ 2020 ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. 2019ರಲ್ಲಿ ಶೆಫಾಲಿ ಸೂದ್ ಸುಪ್ರನ್ಯಾಷನಲ್ ಇಂಡಿಯಾ ಆಗಿ ಮೂಡಿ ಬಂದಿದ್ದರು. ಮಂಗಳೂರು ಮೂಲದ ಆಡ್ಲಿನ್ ಕ್ಯಾಸ್ಟೆಲಿನೋ ಸೇರಿದಂತೆ ಕಳೆದೆರಡು ವರ್ಷದಲ್ಲಿ ಬೇರೆ ಬೇರೆ ವಿಭಾಗದಲ್ಲಿ ಜಯ ಗಳಿಸಿದ್ದ ಮಾಡೆಲ್‍ಗಳು ಪರಸ್ಪರ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಕೊನೆಯ ಸುತ್ತಿನಲ್ಲಿ ಆಡ್ಲಿನ್ ಅವರನ್ನು ವಿಜಯಿಯೆಂದು ಘೋಷಿಸಲಾಯಿತು. ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ 2016ರಲ್ಲಿ ಮಿಸ್ ಸುಪ್ರನ್ಯಾಷನಲ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದರು.