ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಂಗಳೂರು ಪೊಲೀಸ್ ಆಯುಕ್ತರು ನೋಟಿಸ್ ನೀಡಿದ್ದಾರೆ.
ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದರ ಪರಿಣಾಮ ಈಗಾಗಲೇ ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 22ರ ರಾತ್ರಿ 12 ಗಂಟೆವರೆಗೂ ಮಂಗಳೂರಿಗೆ ಬರದಂತೆ ನಿರ್ಬಂಧ ಹೇರಲಾಗಿದೆ .
Advertisement
ಶುಕ್ರವಾರ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಬಸವರಾಜ ರಾಯರೆಡ್ಡಿ, ಉಗ್ರಪ್ಪ, ಎಂ.ಬಿ,ಪಾಟೀಲ್, ಮಾಜಿ ಸಚಿವ ಸೀತಾರಾಮ್ ಮಂಗಳೂರಿಗೆ ತೆರಳಿದ್ದು, ಅವರನ್ನು ಏರ್ ಪೋರ್ಟಿನಲ್ಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಹೈಡ್ರಾಮಾವೇ ನಡೆದಿತ್ತು.
Advertisement
Advertisement
ಕಾಂಗ್ರೆಸ್ ನಿಯೋಗ ನಿನ್ನೆ ಪೊಲೀಸ್ ಗೋಲಿಬಾರಿನಲ್ಲಿ ಮೃತಪಟ್ಟ ಇಬ್ಬರ ಮನೆಗೆ ಭೇಟಿ ಕೊಡಲು ಹಾಗೂ ಆಸ್ಪತ್ರೆಯಲ್ಲಿ ಇರುವವರಿಗೆ ಸಾಂತ್ವನ ಹೇಳಲು ಮಂಗಳೂರಿಗೆ ತೆರಳಿತ್ತು. ಆದರೆ ಅವರನ್ನು ಪೊಲೀಸರು ವಿಮಾನ ನಿಲ್ದಾಣದಿಂದಲೇ ಬೆಂಗಳೂರಿಗೆ ವಾಪಸ್ ಕಳುಹಿಸಲು ಪ್ರಯತ್ನ ಮಾಡಿದ್ದರು. ಈ ವೇಳೆ ಕಾಂಗ್ರೆಸ್ ಮುಖಂಡರು ವಾಪಸ್ ಹೋಗಲು ನಿರಾಕರಿಸಿದ್ದರು. ಆಗ ಪೊಲೀಸರು ನಿಮ್ಮನ್ನು ವಶಕ್ಕೆ ಪಡೆಯುತ್ತೇವೆ ಎಂದಾಗ ಹೈಡ್ರಾಮಾ ಸೃಷ್ಟಿಯಾಗಿತ್ತು.