ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
Advertisement
ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ವಾಯುಭಾರ ಕುಸಿತ ಕಾಣಿಸಿಕೊಂಡಿರುವ ಹಿನ್ನೆಲೆ ಮುಂದಿನ ಮೂರು ದಿನ ಮಳೆಯ ಆರ್ಭಟ ಇರಲಿದೆ. ಜೊತೆಗೆ ಬೆಂಗಳೂರಿನಲ್ಲಿಯೂ ವ್ಯಾಪಾಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬೆಂಗ್ಳೂರಿನ ಹಲವೆಡೆ ಧಾರಾಕಾರ ಮಳೆ- ವಾಹನ ಸವಾರರ ಪರದಾಟ
Advertisement
Advertisement
ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಇಡೀ ಬೆಂಗಳೂರು ಅಕ್ಷರಶಃ ತತ್ತರಿಸಿ ಹೋಗಿದೆ. ಅಲ್ಲದೇ ನಗರದ ಹಲವಾರು ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಅನೇಕ ವಾಹನಗಳು ನೀರಿನಲ್ಲಿ ಮುಳುಗಿ ಹೋಗಿದೆ.
Advertisement
ನಗರದ ಹಲವಾರು ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ಮಳೆಯ ನೀರು ನುಗ್ಗಿದ್ದು, ರಾತ್ರಿ ಎಲ್ಲ ಜನ ನೀರನ್ನು ಮನೆಯಿಂದ ಹೊರಹಾಕಲು ಜಾಗರಣೆ ಮಾಡಿದ್ದಾರೆ. ಮಾಗಡಿ ರಸ್ತೆಯ ಟೋಲ್‍ಗೇಟ್, ಕಸ್ತೂರಬಾ ನಗರ, ಅಶೋಕ ಪಿಲ್ಲರ್, ಜೆ.ಸಿ ರಸ್ತೆ, ಊರ್ವಶಿ ಥಿಯೇಟರ್ ರಸ್ತೆ, ಕೆ.ಆರ್.ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ಲಾಲ್‍ಬಾಗ್, ಸುಧಾಮನಗರ, ಟೌನ್‍ಹಾಲ್, ಮೆಜೆಸ್ಟಿಕ್, ರಾಜಾಜಿನಗರ, ಶಾಂತಿನಗರದಲ್ಲಿ ಭಾರೀ ಮಳೆಯಾಗಿದೆ. ಇದನ್ನೂ ಓದಿ: ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು – ಹಲವು ರಸ್ತೆಗಳು ಜಲಾವೃತ