– ಮಂಗಳೂರಲ್ಲಿ ಗೃಹ ಸಚಿವರ ಜೊತೆಗಿನ ಸಭೆಯಲ್ಲಿ ಭಾರಿ ಗಲಾಟೆ
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಮಂಗಳೂರಲ್ಲಿ ಸಭೆ ನಡೆಸಿದ್ದಾರೆ. ಸಚಿವರು ನಡೆಸಿದ ಸಭೆಯಲ್ಲಿ ಭಾರಿ ಗಲಾಟೆ ಗದ್ದಲ ನಡೆದಿದೆ.
ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಗೃಹ ಸಚಿವರ ಜೊತೆ ಮಾತುಕತೆಗೆ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ತೆರಳಿದ್ದರು. ಪರಮೇಶ್ವರ್ ಜೊತೆ ಮಾತುಕತೆಯಲ್ಲಿ ಮೊನ್ನೆ ನಡೆದ ಗುಂಪು ಹತ್ಯೆ ವಿಚಾರ ಪ್ರಸ್ತಾಪವಾಯಿತು. ಇದೇ ವಿಚಾರದ ಚರ್ಚೆ ವೇಳೆ ಸಭೆಯಲ್ಲಿ ಗದ್ದಲವಾಗಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಸಫ್ವಾನ್ ಗ್ಯಾಂಗ್‌ನ ಇಬ್ಬರು ಆರೋಪಿಗಳು ಅರೆಸ್ಟ್
ಟೇಬಲ್ ಬಡಿದು ಗೃಹ ಸಚಿವರ ಸಭೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ ಹೊರಹಾಕಿದ್ದಾರೆ. ಕುಡುಪು ಬಳಿ ನಡೆದ ಅಶ್ರಫ್ ಗುಂಪು ಹತ್ಯೆ ಬಗ್ಗೆ ಸ್ಥಳೀಯ ಮುಸ್ಲಿಂ ನಾಯಕರು ಮಾಹಿತಿ ನೀಡಿದ್ದಾರೆ. ಸಮಗ್ರ ಮಾಹಿತಿ ಪಡೆದು ಕಮಿಷನರ್ ಕಚೇರಿ ಪರಮೇಶ್ವರ್ ತೆರಳಿದ್ದಾರೆ. ಸಭೆಯಲ್ಲಿ ಪರಮೇಶ್ವರ್‌ಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಾಥ್ ನೀಡಿದ್ದರು.
ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ ಮಂಗಳೂರಿನಲ್ಲಿ ಆಕ್ರೋಶದ ಕಾವು ಹೆಚ್ಚಾಗಿದೆ. ಹಿಂದೂಪರ ಸಂಘಟನೆಗಳು ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಬಂದ್ ಮಾಡಿದ್ದಾರೆ. ಸುಹಾಸ್ ಹತ್ಯೆ ಬೆನ್ನಲ್ಲೇ ಹಲವೆಡೆ ಘರ್ಷಣೆಗಳು ಕೂಡ ಆಗಿವೆ. ಮಂಗಳೂರಿನ ಮೂರು ಕಡೆ ಚಾಕು ಇರಿತ ಆಗಿದೆ. ಇದನ್ನೂ ಓದಿ: ಮಂಗಳೂರಲ್ಲಿ ಮೀನು ವ್ಯಾಪಾರಿಯ ಹತ್ಯೆಗೆ ಯತ್ನ – ಹಿಂದೂ ಮಹಿಳೆಯ ಸಮಯಪ್ರಜ್ಞೆಯಿಂದ ಬಚಾವ್
ಪ್ರಕರಣದ ಗಂಭೀರತೆ ಅರಿತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಪೊಲೀಸರು ಮಾಹಿತಿ ಪಡೆದುಕೊಂಡಿದ್ದು, ಸ್ಥಳೀಯ ಮುಖಂಡರ ಜೊತೆ ಸಭೆ ನಡೆಸಿದ್ದರು.