ಮಂಗಳೂರು: ಇಸ್ರೇಲ್‌ನಲ್ಲಿ (Israel) ನರಮೇಧ ನಡೆಸಿದ ಹಮಾಸ್ ಉಗ್ರರಿಗೆ (Hamas Militants) ಮಂಗಳೂರಿನ (Mangaluru) ವ್ಯಕ್ತಿಯೊಬ್ಬ ಬೆಂಬಲ ನೀಡಿದ್ದು, ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದಿದ್ದಾನೆ.
ಮಂಗಳೂರು ಮೂಲದ ಝಾಕಿರ್ ಎಂಬಾತ ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ (Social Media) ವೀಡಿಯೋ ಹರಿಬಿಟ್ಟಿದ್ದಾನೆ. ಹಮಾಸ್ ಉಗ್ರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ ಈತ ಪ್ಯಾಲೇಸ್ಟೈನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸುವಂತೆ ಕರೆ ನೀಡಿದ್ದಾನೆ. ಅಲ್ಲದೇ ಹಮಾಸ್ ಉಗ್ರರನ್ನು ದೇಶ ಪ್ರೇಮಿ ಯೋಧರೆಂದು ಬಣ್ಣಿಸಿ ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದಾನೆ. ಇದನ್ನೂ ಓದಿ: ಬೃಹತ್ ದಾಳಿಯ ಮುನ್ಸೂಚನೆ ನೀಡಿದ ಇಸ್ರೇಲ್
ಈತನ ವಿವಾದಾತ್ಮಕ ಹೇಳಿಕೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಝಾಕಿರ್ ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್ ಎಂಬ ಹೆಸರಿನಲ್ಲಿ ಗುರುತಿಸಿಕೊಂಡಿದ್ದಾನೆ. ಝಾಕಿರ್ ವೀಡಿಯೋಗೆ ಎಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಹಿಂದೂ ಸಂಘಟನೆಗಳಿಂದಲೂ ಭಾರೀ ವಿರೋಧ ವ್ಯಕ್ತವಾಗಿದೆ. ಝಾಕಿರ್‌ನನ್ನು ಈ ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಇದನ್ನೂ ಓದಿ: Operation Ajay- ಇಸ್ರೇಲಿನಿಂದ 9 ಮಂದಿ ಕನ್ನಡಿಗರು ದೆಹಲಿಗೆ ಆಗಮನ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]