ಮಾಜಿ ಸಂಸದರ ಪತ್ನಿಯ ಕತ್ತಿಗೆ ಕೈ ಹಾಕಿ ಮಾಂಗಲ್ಯ ಸರ ಕಳ್ಳತನ

Public TV
1 Min Read
karwar

ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿಯಲ್ಲಿ ಮಾಜಿ ಸಂಸದ ದೇವರಾಯ ನಾಯ್ಕ (Devaraya Naik) ಅವರ ಮನೆಗೆ ಹಾಡ ಹಗಲೇ ಅಪರಿಚಿತ ವ್ಯಕ್ತಿಯೊರ್ವ ನೀರು ಕೇಳುವ ನೆಪದಲ್ಲಿ ಬಂದು ಮಾಜಿ ಸಂಸದರ ಪತ್ನಿಯ ಕತ್ತಿಗೆ ಕೈ ಹಾಕಿ ಮಾಂಗಲ್ಯವನ್ನು ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ.

ಕಾಂಗ್ರೆಸ್‌ನಿಂದ 4 ಬಾರಿ ಉತ್ತರ ಕನ್ನಡ ಜಿಲ್ಲೆಯ ಸಂಸದರಾಗಿ ಆಯ್ಕೆಯಾಗಿದ್ದ ದೇವರಾಯ ನಾಯ್ಕ ಅವರ ಪತ್ನಿ ಗೀತಾ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಅಪರಿಚಿತ ವ್ಯಕ್ತಿ ಬಂದು ನೀರು ಕೇಳುವ ನೆಪ ಮಾಡಿಕೊಂಡು, ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಕಿತ್ತುಕೊಂಡು ಹೋಗಿದ್ದಾನೆ. ಇದನ್ನೂ ಓದಿ: ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ – ನಾಲೆಗಳಿಗೆ ನೀರು ಹರಿಸದಂತೆ ರೈತರ ಪಟ್ಟು

ಅಂದಾಜು 3 ಲಕ್ಷ ರೂ. ಮೌಲ್ಯದ 20 ಗ್ರಾಂ ತೂಕದ ಮಾಂಗಲ್ಯ ಸರ ಇದಾಗಿದ್ದು, ಮನೆಯಲ್ಲಿ ಬೇರಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ವಿಷಯ ತಿಳಿದ ನಂತರ ಸಿದ್ದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಮಗ ನಾಗರಾಜ್ ನಾಯ್ಕ ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದೇಶದ ಹೆಸರು ಬದಲಾವಣೆಗಿಂತ ಜನರ ಬದುಕು ಬದಲಾವಣೆ ಮುಖ್ಯ: ಡಿಕೆಶಿ

Web Stories

Share This Article