ಬೆಂಗಳೂರು: ಒಂದು ಕಡೆ ಬಗೆಬಗೆಯ ಮಾವು, ಮತ್ತೊಂದು ಕಡೆ ಹಣ್ಣುಗಳ ರಾಜ ಹಲಸಿನ ಹಣ್ಣು, ರೈತರಿಂದ ನೇರವಾಗಿ ಗ್ರಾಹಕರ ಕೈಗೆ ತಲುಪಿಸಲು ಹಾಪ್‌ಕಾಮ್ಸ್ ಮತ್ತೆ ಈ ವರ್ಷ ಮಾವು ಮತ್ತು ಹಲಸಿನ ಮೇಳಕ್ಕೆ ಚಾಲನೆ ನೀಡಿದೆ.
ಹಾಪ್‌ಕಾಮ್ಸ್ ನಲ್ಲಿ ಇಂದಿನಿಂದ ನಡೆಯುವ ಮಾವು ಮತ್ತು ಹಲಸು ಮೇಳಕ್ಕೆ ತೋಟಾಗಾರಿಕೆ ಸಚಿವ ಮುನಿರತ್ನ ಚಾಲನೆ ನೀಡಿದ್ದು, ಸೀಸನ್ ಮುಗಿಯುವವರೆಗೆ ಗ್ರಾಹಕರಿಗೆ ಮಾವು ಮತ್ತು ಹಲಸಿನ ಹಣ್ಣುಗಳು ರಿಯಾಯಿತಿ ದರದಲ್ಲಿ ಲಭ್ಯವಾಗಲಿದೆ. ಈ ಬಾರಿ ಅಕಾಲಿಕ ಮಳೆಯಿಂದಾಗಿ ಮಾವು ಬೆಳೆ ನಷ್ಟವಾಗಿದ್ದು, ಶೇ.30 ರಷ್ಟು ಮಾತ್ರ ಪಸಲು ಬಂದಿದೆ. ಆದರೂ, ಬಗೆಬಗೆಯ 14 ಬಗೆಯ ಮಾವಿನ ಹಣ್ಣು ಮೇಳದಲ್ಲಿ ಗ್ರಾಹಕರಿಗೆ ಲಭ್ಯವಾಗುತ್ತಿವೆ. ಇದನ್ನೂ ಓದಿ: KPCC ಸಭೆಗೆ ಶಾಸಕಿ ಹೆಬ್ಬಾಳ್ಕರ್, ನಿಂಬಾಳ್ಕರ್ ಗೈರು
ಮಾವು ಮೇಳದಲ್ಲಿ ಬಾದಾಮಿ, ಮಲ್ಲಿಕಾ, ರಸಪೂರಿ, ಬೈಗಂಪಲ್ಲಿ, ಸೇಂದೂರ, ತೋತಾಪುರಿ, ದಶಹರಿ, ಮಲಗೋವಾ, ಹಿಮಾಮ್ ಪಸಂದ್, ಕಾಲಾಪಾಡ್, ಕೇಸರ್, ಸಕ್ಕರೆಗುತ್ತಿ ಮಾವಿನ ಹಣ್ಣುಗಳನ್ನು ರೈತರಿಂದ ಹಾಪ್‌ಕಾಮ್ಸ್ ನೇರವಾಗಿ ಖರೀದಿಸಿ ಮಾರಾಟ ಮಾಡುತ್ತಿವೆ. ಯಾವುದೇ ರಾಸಾಯನಿಕ ಬಳಕೆ ಮಾಡದೇ ನೈಸರ್ಗಿಕವಾಗಿ ಬೆಳೆದ ಹಣ್ಣುಗಳನ್ನು ಇಲ್ಲಿ ಮಾರಾಟ ಮಾಡಲಾಗ್ತಿದೆ. ಜೊತೆಗೆ 7 ಬಗೆಯ ಹಲಸಿನ ಹಣ್ಣುಗಳೂ ದೊರೆಯುತ್ತಿವೆ. ಇದನ್ನೂ ಓದಿ: ನಮ್ಮಲ್ಲಿ ಯಾವುದೇ ಬಣ ಇಲ್ಲ, ಹೈಕಮಾಂಡ್ ಹೇಳಿದ್ದೇ ಅಂತಿಮ: ಪರಿಷತ್ ಟಿಕೆಟ್ ಬಗ್ಗೆ ಡಿಕೆಶಿ ಮಾತು
ವಿವಿಧ ಬಗೆಯ ಮಾವಿನ ಹಣ್ಣು ಕೆಜಿಗೆ 32 ರಿಂದ 215 ರೂಪಾಯಿ ವರೆಗೆ, ಹಲಸಿನ ಹಣ್ಣು ಪ್ರತಿ ಕೆಜಿಗೆ 25ರೂ. ನಿಗದಿಯಾಗಿದೆ.