ಸತತ 2ನೇ ಬಾರಿಗೆ ತ್ರಿಪುರ ಸಿಎಂ ಆಗಿ ಮಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ

Public TV
1 Min Read
Tripura Chief Minister Manik Saha

ಅಗರ್ತಲಾ: ಬಿಜೆಪಿ (BJP) ಮುಖಂಡ ಮಣಿಕ್ ಸಹಾ (Manik Saha) ಅವರು ಬುಧವಾರ ತ್ರಿಪುರಾ (Tripura) ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ 8 ಸಚಿವರು ಪ್ರಮಾಣವಚನ ಸ್ವೀಕರಿಸಿದರು.

ಬುಧವಾರ ಅಗರ್ತಲಾದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi), ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda), ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಇತರ ಹಿರಿಯ ಮುಖಂಡರು ಭಾಗಿಯಾಗಿದ್ದರು.

Tripura Chief Minister Manik Saha

ಫೆ. 16ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಸೋಲನ್ನು ಅನುಭವಿಸಿತ್ತು. ಈ ಹಿನ್ನೆಲೆಯಲ್ಲಿ ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಸಿಪಿಎಂ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿವೆ. ಇದನ್ನೂ ಓದಿ: ಜಿಲ್ಲಾಡಳಿತದ ವಿರುದ್ಧ ಮುಸ್ಲಿಮರು ಕಿಡಿ – ದತ್ತಪೀಠದಲ್ಲಿ ಉರುಸ್‌ನಿಂದ ದೂರ ಉಳಿಯುವ ತೀರ್ಮಾನ

2022 ರಲ್ಲಿ ಬಿಪ್ಲಬ್ ದೇಬ್ ಬದಲಿಗೆ ಡಾ ಮಾಣಿಕ್ ಸಹಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಬಿಜೆಪಿಯಲ್ಲಿ ತಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದ ಸಹಾ 2020 ರಲ್ಲಿ ರಾಜ್ಯದಲ್ಲಿ ಪಕ್ಷದ ಮುಖ್ಯಸ್ಥರಾಗಿದ್ದರು. ಆದಾಗ್ಯೂ ಅವರು ಮುಖ್ಯಮಂತ್ರಿಯಾಗುವ ಮೊದಲು ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಟೌನ್ ಬರ್ಡೋವಾಲಿ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾದರು. ಈ ವಿಧಾನಸಭಾ ಚುನಾವಣೆಯಲ್ಲಿಯೂ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ನೌಕಾಸೇನೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಮೂವರು ಪೈಲೆಟ್‌ಗಳ ರಕ್ಷಣೆ

Share This Article
Leave a Comment

Leave a Reply

Your email address will not be published. Required fields are marked *