ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (S.M Krishna) ಅವರು ಸದ್ಯ ಐಸಿಯು (ICU) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರ ತಂಡ ಆರೈಕೆ ಮಾಡುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.
Advertisement
ಶ್ವಾಸಕೋಶದ (Lungs) ಸೊಂಕಿನಿಂದ ಬಳಲುತ್ತಿರುವ ಎಸ್‍ಎಂಕೆಗೆ ಡಾ ಸತ್ಯನಾರಾಯಣ್ ಮತ್ತು ಡಾ ಸುನೀಲ್ ಕಾರಂತ್ ರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದು ವೈದ್ಯರ ತಂಡ ಆರೈಕೆ ಮಾಡ್ತಾ ಇದೆ. ಶ್ವಾಸಕೋಶದ ಒಳಗಡೆ ಆಕ್ಸಿಜನ್ (Oxygen) ಪ್ರಮಾಣ ಏರುಪೇರು ಆಗ್ತಾ ಇದ್ದು, ವೈದ್ಯರ ತಂಡ ನಿಗಾವಹಿಸಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ಮೇಲ್ವಿಚಾರಣೆ ನಡೆಸುತ್ತಾ ಇದ್ದಾರೆ. ಅಲ್ಲದೆ ವೈದ್ಯರ ತಂಡದ ಜೊತೆ ಸಂಪರ್ಕದಲ್ಲಿ ಇದ್ದಾರೆ ಎಂದು ಬುಲೆಟಿನ್ ನಲ್ಲಿ ತಿಳಿಸಲಾಗಿದೆ.
Advertisement
ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ ಕೃಷ್ಣ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. pic.twitter.com/D3voHHc5T6
— Siddaramaiah (@siddaramaiah) September 25, 2022
Advertisement
ತೀವ್ರ ಜ್ವರ ಹಿನ್ನೆಲೆ ಶನಿವಾರ ರಾತ್ರಿ 11 ಗಂಟೆವರೆಗೂ ವೈದೇಹಿ (Vydehi Hospital) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದರು. ಐಸಿಯು ಮತ್ತು ಹೆಚ್ಚಿನ ನಿಗಾ ಹಿನ್ನೆಲೆ ಕುಟುಂಬಸ್ಥರು ಅವರನ್ನು ಮಣಿಪಾಲ್ ಆಸ್ಪತ್ರೆ (Manipal Hospital) ಗೆ ಶಿಫ್ಟ್ ಮಾಡಿದ್ದಾರೆ. ಸದ್ಯ ಮಣಿಪಾಲ್ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಊಹಾಪೋಹಗಳಿಗೆ ಕಿವಿಗೊಡದಂತೆ SMK ನಿವಾಸದಿಂದ ಸಂದೇಶ
Advertisement
ನಮ್ಮ ಪಕ್ಷದ ಹಿರಿಯರು, ಕೇಂದ್ರದ ಮಾಜಿ ಸಚಿವರಾದ ಶ್ರೀಯುತ ಎಸ್.ಎಂ.ಕೃಷ್ಣ ಸರ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ
ದಾಖಲಾದ ಸುದ್ದಿ ಕೇಳಿ ಮನಸ್ಸಿಗೆ
ತುಂಬಾ ಬೇಸರವಾಯಿತು. ಆದಷ್ಟು ಬೇಗ ಅವರು ಚೇತರಿಸಿಕೊಂಡು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ. pic.twitter.com/3Urhm1FyS7
— B Sriramulu (@sriramulubjp) September 25, 2022
ಮಾಜಿ ಸಿಎಂ ಆಸ್ಪತ್ರೆಗೆ ದಾಖಲಾದ ವಿಚಾರ ಗೊತ್ತಾಗುತ್ತಿದ್ದಂತೆಯೇ ರಾಜಕೀಯ ಮುಖಂಡರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿಕೊಂಡಿದ್ದಾರೆ. ಅಲ್ಲದೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಯವರು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಸಿಎಂಗೆ ಸುಧಾಕರ್ (Dr. K Sudhakar) ಮತ್ತಿರರು ಸಾಥ್ ನೀಡಿದ್ದಾರೆ.