ಇಂಫಾಲ್: ಮಣಿಪುರದಲ್ಲಿ (Manipur) ಅಪಹರಣಕ್ಕೊಳಗಾಗಿದ್ದ ವಿದ್ಯಾರ್ಥಿಗಳ (Students) ಹತ್ಯೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಪೊಲೀಸರ ಲಾಠಿ ಚಾರ್ಜ್‍ನಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹೆಚ್ಚಿನವರು ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗಳ ಮೃತದೇಹದ ಚಿತ್ರಗಳು ವೈರಲ್ ಆದ ಬಳಿಕ ಆರಂಭಗೊಂಡ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಅಲ್ಲದೇ ಅಶ್ರುವಾಯು ಸಿಡಿಸಿ ಹತೋಟಿಗೆ ಪ್ರಯತ್ನಿಸಿದ್ದಾರೆ. ಇದನ್ನೂ ಓದಿ: ನಾಗೋರ್ನೊ-ಕರಾಬಖ್ ಇಂಧನ ಡಿಪೋ ಸ್ಫೋಟ – 20 ಮಂದಿ ಸಾವು
Advertisement
Advertisement
ಭದ್ರತಾ ಪಡೆಗಳು, ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳ ಕಚೇರಿ ತಲುಪದಂತೆ ತಡೆಯಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಗಾಯಗೊಂಡ ಪ್ರತಿಭಟನಾಕಾರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
Advertisement
ಘಟನೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ `ಮಕ್ಕಳು ಜನಾಂಗೀಯ ಹಿಂಸಾಚಾರದ ಅತ್ಯಂತ ದುರ್ಬಲ ಸಂತ್ರಸ್ತರಾಗಿದ್ದಾರೆ. ಅವರನ್ನು ರಕ್ಷಿಸಲು ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುವುದು ನಮ್ಮ ಕರ್ತವ್ಯವಾಗಿದೆ. ಮಣಿಪುರದಲ್ಲಿ ನಡೆಯುತ್ತಿರುವ ಭೀಕರ ಅಪರಾಧಗಳು ಪದಗಳಿಗೆ ಮೀರಿದೆ. ಕೇಂದ್ರ ಸರ್ಕಾರದ ನಿಷ್ಕ್ರಿಯತೆಗೆ ನಾಚಿಕೆಯಾಗಬೇಕು ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಉಗ್ರರಿಗೆ ಬೆಂಬಲ – ಇಬ್ಬರು ಮಹಿಳೆಯರು, ಓರ್ವ ಅಪ್ರಾಪ್ತ ಸೇರಿ ಆರು ಮಂದಿ ಅರೆಸ್ಟ್
Web Stories