ಇಂಫಾಲ್: ಮಣಿಪುರ-ಅಸ್ಸಾಂ ಗಡಿಯಲ್ಲಿ ಜಿರಿ ನದಿ ಮತ್ತು ಬರಾಕ್ ನದಿಯ ಸಂಗಮದಲ್ಲಿ ಮೂರು ಶವಗಳು ಪತ್ತೆಯಾಗಿವೆ. ಜಿರಿಬಾಮ್ ಜಿಲ್ಲೆಯಿಂದ ಕಾಣೆಯಾದವರ ಶವಗಳಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಶುಕ್ರವಾರ ರಾತ್ರಿ ಜಿರಿಬಾಮ್ ಜಿಲ್ಲೆಯ ಬೊರೊಬೆಕ್ರಾದಿಂದ 16 ಕಿಮೀ ದೂರದಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳ ಶವಗಳು ಪತ್ತೆಯಾಗಿವೆ. ಅಲ್ಲಿಂದ ಸೋಮವಾರ ಆರು ಜನರು ನಾಪತ್ತೆಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಆಟೋಗೆ ಕಾರು ಡಿಕ್ಕಿ – ನವಜೋಡಿ ಸೇರಿ 7 ಮಂದಿ ಸಾವು
- Advertisement -
- Advertisement -
ಶುಕ್ರವಾರ ರಾತ್ರಿ ಅಸ್ಸಾಂನ ಸಿಲ್ಚಾರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (SMCH) ಅಪರಿಚಿತ ಶವಗಳನ್ನು ತರಲಾಯಿತು. ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಶವಗಳು ನಾಪತ್ತೆಯಾದವರದೇ ಎಂಬುದು ಇನ್ನಷ್ಟೇ ದೃಢವಾಗಬೇಕಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
- Advertisement -
ಮರಣೋತ್ತರ ಪರೀಕ್ಷೆಗಾಗಿ ಕಾಯುತ್ತಿದ್ದೇವೆ. ಗುರುತಿನ ಭಾವಚಿತ್ರಗಳನ್ನು ಸಂಗ್ರಹಿಸಿದ್ದೇವೆ. ಇಂಫಾಲ್‌ನ ಜಿರಿಬಾಮ್‌ನಲ್ಲಿ ಪತ್ತೆಯಾದ ಮೃತದೇಹಗಳ ಶವಪರೀಕ್ಷೆಯನ್ನು ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಅಸ್ಸಾಂನ ಸಿಲ್ಚಾರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಫ್ರಿಕಾ ವಿರುದ್ಧ ದಾಖಲೆಯ ಜಯದೊಂದಿಗೆ ಸರಣಿ ಗೆದ್ದ ಟೀಂ ಇಂಡಿಯಾ
- Advertisement -
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಶುಕ್ರವಾರ ರಾತ್ರಿ ಹಿರಿಯ ಸಚಿವರೊಂದಿಗೆ ಸಭೆ ನಡೆಸಿ, ಶವಗಳು ಪತ್ತೆಯಾಗಿರುವ ಸುದ್ದಿಯ ನಂತರ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ. ಮೃತದೇಹಗಳ ಪತ್ತೆ ಸುದ್ದಿ ಹರಡುತ್ತಿದ್ದಂತೆ ಐದು ಜಿಲ್ಲೆಗಳಲ್ಲಿ ಉದ್ವಿಗ್ನತೆ ತಲೆದೋರಿದೆ.