ಇಂಫಾಲ: ಕಳೆದ ಹಲವು ದಿನಗಳಿಂದ ಮಣಿಪುರದಲ್ಲಿ (Manipur) ನಡೆಯುತ್ತಿರುವ ಹಿಂಸಾಚಾರದಲ್ಲಿ (Violence) ಪ್ರಾಣ ಕಳೆದುಕೊಂಡವರಿಗೆ ಕೇಂದ್ರ ಹಾಗೂ ಮಣಿಪುರ ರಾಜ್ಯ ಸರ್ಕಾರ ಮಂಗಳವಾರ ಪರಿಹಾರ (Compensation) ಘೋಷಿಸಿದೆ.
ಮಣಿಪುರ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಮಾತ್ರವಲ್ಲದೇ ಮೃತರ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ (Job) ನೀಡಲಾಗುವುದು. ಪರಿಹಾರದ ಮೊತ್ತವನ್ನು ಕೇಂದ್ರ ಹಾಗೂ ರಾಜ್ಯ ಸಮಾನವಾಗಿ ಭರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಸೋಮವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸಭೆ ನಡೆಸಿದ್ದು, ಈ ವೇಳೆ ಪರಿಹಾರವನ್ನು ಘೋಷಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮಾವೋವಾದಿಗಳಿಂದ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು – 5 ಬಾಂಬ್ ನಿಷ್ಕ್ರಿಯ
Advertisement
Advertisement
ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕಳೆದ 1 ತಿಂಗಳಲ್ಲಿ ಸಾವಿನ ಸಂಖ್ಯೆ 80ಕ್ಕೆ ಏರಿಕೆಯಾಗಿದೆ. ಮಣಿಪುರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿರುವುದರಿಂದ ಮೇ 31ರ ವರೆಗೂ ರಾಜ್ಯಾದ್ಯಂತ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಆರನೆಯ ಗ್ಯಾರಂಟಿ ಪಕ್ಕಾ: ಪ್ರಿಯಾಂಕ್ ಖರ್ಗೆ