ಇಂಫಾಲ್: ಈ ಬಾರಿಯ ಮಣಿಪುರ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ದೊರೆಯುವುದಿಲ್ಲ. ಬದಲಿಗೆ ಪ್ಲ್ಯಾನ್ ಬಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್‍ನ ಹಿರಿಯ ಮುಖಂಡರಾದ ವಿರೋಧ ಪಕ್ಷ ನಾಯಕ ಒಕ್ರಾಮ್ ಇಬೋಬಿ ಸಿಂಗ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೂ ಇತರ ಪಕ್ಷಗಳಲ್ಲಿ ಸ್ಪರ್ಧಿಸುತ್ತಿರುವರನ್ನು ಸೆಳೆದುಕೊಳ್ಳಲು ಪ್ರಯತ್ನಿಸುತ್ತದೆ. ಮತ್ತೊಮ್ಮೆ ಅಧಿಕಾರವನ್ನು ಹಿಡಿಯಲು ಎಲ್ಲಾ ಪ್ರಯತ್ನವನ್ನು ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
2017ರಲ್ಲಿ ರಾಜ್ಯಪಾಲರು ನಮಗೆ ಸರ್ಕಾರ ರಚಿಸಲು ಅವಕಾಶ ನೀಡಲಿಲ್ಲ. ಬಿಜೆಪಿಯ ಕೇಂದ್ರ ಸಚಿವರು ರಾಜಭವನದಲ್ಲಿ ರಾಜ್ಯಪಾಲರ ಜೊತೆ ಕುಳಿತಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪುನಶ್ಚೇತನಗೊಳ್ಳಲಿದೆ. ನಾವು ಈಗಾಗಲೇ ಚುನಾವಣೋತ್ತರ ಮೈತ್ರಿಗೆ ಕೆಲಸ ಮಾಡುತ್ತಿದ್ದೇವೆ ಎಂದರು.
2017ರಲ್ಲಿ, ಕಾಂಗ್ರೆಸ್ 60ರಲ್ಲಿ 28 ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಸರ್ಕಾರ ರಚಿಸುವಲ್ಲಿ ವಿಫಲವಾಗಿತ್ತು. ಬಿಜೆಪಿಯು ಸಮ್ಮಿಶ್ರ ಸರ್ಕಾರವನ್ನು ರಚಿಸುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!
ಕಾಂಗ್ರೆಸ್ ಈ ಬಾರಿಯ ಚುನಾವಣೆಯಲ್ಲಿ ಅಧಿಕಾರವನ್ನು ಹಿಡಿಯಲು ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತುಕತೆ ನಡೆಸುತ್ತಿದೆ. ಇದನ್ನೂ ಓದಿ: ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್