ಇಂಫಾಲ್: ಇಂದು ಬೆಳಗ್ಗೆ 7ರಿಂದ 4ಗಂಟೆಯವರೆಗೆ ಮಣಿಪುರದ 38 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ.
28 ವಿಧಾನ ಕ್ಷೇತ್ರಗಳಲ್ಲಿ ಕಣಿವೆ ಜಿಲ್ಲೆಗಳಾದ 29 ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಬಿಷ್ಣುಪುರವಾಗಿದ್ದರೆ, ಉಳಿದ 9 ಕ್ಷೇತ್ರಗಳು ಚರ್ಚಂಡ್‍ಪುರ, ಕಾಂಗ್‍ಪೋಕ್ಪಿ ಮತ್ತು ಫರ್ಜಾಲ್ ಪ್ರದೇಶದಲ್ಲಿದೆ. ಮಣಿಪುರದ ವಿಧಾನಸಭೆ ಚುನಾವಣೆಯೂ 2ಹಂತದಲ್ಲಿ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ನಡೆಯುವ ಮತದಾನ ಸಂಜೆ 4ಗಂಟೆಗೆ ಕೊನೆಗೊಳ್ಳಲಿದೆ.
Advertisement
Advertisement
ಮೊದಲ ಹಂತದಲ್ಲಿ 15 ಮಹಿಳೆಯರು ಸೇರಿದಂತೆ ಒಟ್ಟು 173 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಪ್ರಮುಖ ಅಭ್ಯರ್ಥಿಗಳ ಪೈಕಿ ಮುಖ್ಯಮಂತ್ರಿ ಮತ್ತು ಹೀಂಗಾಂಗ್‍ನ ಬಿಜೆಪಿ ಅಭ್ಯರ್ಥಿ ಎನ್. ಬಿರೇನ್ ಸಿಂಗ್, ಸಚಿವರಾದ ತೊಂಗಮ್ ಬಿಸ್ವಜಿತ್ ಸಿಂಗ್, ಸಿಂಗ್‍ಜಮೇಯ್‍ನಿಂದ ಸ್ಪೀಕರ್ ವೈ. ಖೇಮ್‍ಚಂದ್ ಸಿಂಗ್, ಉಪ ಮುಖ್ಯಮಂತ್ರಿ ಮತ್ತು ಎನ್‍ಪಿಪಿ ಅಭ್ಯರ್ಥಿ ಯುಮ್ನಮ್ ಜಾಯ್‍ಕುಮಾರ್ ಉರಿಪೋಕ್ ಮತ್ತು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಎನ್ ಲೋಕೇಶ್ ಸಿಂಗ್ ನಂಬೋಲ್ ಅವರು ಇಂದು ನಡೆಯುವ ಮೊದಲ ಹಂತದ ಮತದಾನದಲ್ಲಿ ಸ್ಪರ್ಧಿಸಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ- ಇಂದು ಬಿಡದಿಯಿಂದ ಮತ್ತೆ ಆರಂಭ
Advertisement
Advertisement
ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ ಮಣಿಪುರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಮತದಾನ ಮಾಡುತ್ತಿರುವ ಎಲ್ಲರಿಗೂ ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವಂತೆ ಕರೆ ನೀಡಿದರು. ಜೊತೆಗೆ ಮೊದಲಬಾರಿಗೆ ಮತದಾನ ಮಾಡುತ್ತಿರುವವರಿಗೆ ಹಾಗೂ ಯುವಕರು ತಮ್ಮ ಹಕ್ಕನ್ನು ಚಲಾಯಿಸುವಂತೆ ವಿಶೇಷವಾಗಿ ತಿಳಿಸುತ್ತೇನೆ ಎಂದು ಮನವಿ ಮಾಡಿದರು.
Urging all those voting today in the first phase of the Manipur Assembly elections to turnout in record numbers and cast their vote. I particularly call upon the young and first time voters to exercise their franchise.
— Narendra Modi (@narendramodi) February 28, 2022
ಈ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕ ಸ್ಥಾನಗಳನ್ನು ಪಡೆದುಕೊಂಡಿದ್ದರೂ, ಬಹುಮತ ಗಳಿಸಿರಲಿಲ್ಲ. ಆದರೆ ಬಿಜೆಪಿ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿ ಪ್ರಬಲ ಪಕ್ಷಗಳಾಗಿ ಹೊರಹೊಮ್ಮಿದೆ. ಇದನ್ನೂ ಓದಿ: ಡಬಲ್ ಇಂಜಿನ್ ಸರ್ಕಾರ ಕರ್ನಾಟಕಕ್ಕೆ ಡಬಲ್ ಮೋಸ ಮಾಡಿದೆ: ರಣದೀಪ್ ಸಿಂಗ್ ಸುರ್ಜೇವಾಲಾ